ಬೆಳಗಾವಿ : ರಾಜ್ಯದ ಬಸ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಯೋಚನೆ – ಸಚಿವ ಸತೀಶ ಜಾರಕಿಹೊಳಿ

Date:

ರಾಜ್ಯದಾದ್ಯಂತ ಭದ್ರತಾ ದೃಷ್ಟಿಯಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ನಗರದಲ್ಲಿ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ವ್ಯವಸ್ಥೆ ಇನ್ನುಳಿದ ನಿಲ್ದಾಣಗಳಲ್ಲಿಯೂ ಅಳವಡಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಿದರೂ ಸಭೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಸತೀಶ ಜಾರಕಿಹೊಳಿ, “ಶೆಟ್ಟರ್ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಲ್ಲ. ಆದ್ದರಿಂದ ಅವರಿಗೆ ಸಭೆಗೆ ಆಹ್ವಾನ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...