ಬೆಳಗಾವಿ | ರೈತರ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಆದ್ಯತೆ: ಅಶೋಕ ಪಟ್ಟಣ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದಲ್ಲಿ ಸೋಮವಾರ ಮುನವಳ್ಳಿ ಕೊಟುಮಚಗಿಯಿಂದ ಗೊಡಚಿ ಮಾರ್ಗದ ರಸ್ತೆಯ ₹6 ಕೋಟಿ ವೆಚ್ಚದಲ್ಲಿ ಸುಮಾರ 12 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಅಶೋಕ ಪಟ್ಟಣ “ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಖ್ಯ ರಸ್ತೆಗಳ ಜೊತೆಗೆ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಹಾಗೂ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಿದೆ” ಎಂದು ಹೇಳಿದರು.

“ರಾಮದುರ್ಗ ತಾಲ್ಲೂಕಿನ ರಸ್ತೆಗಳ ಸುಧಾರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನ ಅವರು ₹25 ಕೋಟಿ ಅನುದಾನ ನೀಡಿದ್ದಾರೆ. ಸಂಚಾರಕ್ಕೆ ಅಡಚಣೆಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು” ಎಂದು ಶಾಸಕ ಅಶೋಕ ಪಟ್ಟಣ ತಿಳಿಸಿದ್ದಾರೆ.

“ಕಾಮಗಾರಿ ಬೇಗ ಮುಗಿಸುವ ಅವಸರದಲ್ಲಿ ಮಾಡಿ ಹಾಗೂ ಹೆಚ್ಚಿನ ಲಾಭಕ್ಕಾಗಿ ಗುತ್ತಿಗೆದಾರರು ಕಳಪೆ ಕೆಲಸ ಮಾಡಿದರೆ ಸಹಿಸುವುದಿಲ್ಲ. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ. ಯಾವುದೇ ಸಮಸ್ಯೆಗಳಿದ್ದರೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಲು ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಯ ಸದಸ್ಯರು ಗಮನ ಹರಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಗೊಡಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಕವ್ವ ವಗ್ಗರ, ಸದಸ್ಯರಾದ ಸಂಗಪ್ಪ ಪಾಕನಟ್ಟಿ, ಶಿವನಗೌಡ ಪಾಟೀಲ, ಈರಣ್ಣ ಕಾಮನ್ನವರ, ಗೊರವ, ಗುರುಬಾಯಿ ಪೂಜೇರ, ಸಾವಿತ್ರಿ ಜಾಮದಾರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಯಪ್ಪ ಕತ್ತಿ, ಜಿ.ಬಿ.ರಂಗನಗೌಡ್ರ, ಶಿದ್ದಿಂಗಪ್ಪ ಸಿಂಗಾರಗೊಪ್ಪ, ಪಿಡಿಒ ಚನ್ನಮ್ಮ ಕೊಪ್ಪದ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...