ಚಳಿಗಾಲದ ಅಧಿವೇಶನ | ಬೆಳಗಾವಿಯಲ್ಲಿ ಡಿ.1 ರಿಂದ 30ರವರೆಗೆ ನಿಷೇಧಾಜ್ಞೆ

Date:

ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡಲು ಸುವರ್ಣಸೌಧದ ಸುತ್ತಲಿನ ಪ್ರದೇಶದಲ್ಲಿ ಡಿ.1ರಿಂದ 30ರವರೆಗೆ 144 ಕಲಂ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಹಿರೇಬಾಗೆವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಸುವರ್ಣ ವಿಧಾನ ಸೌಧ, ವಿಧಾನ ಸೌಧದದ ಪೂರ್ವದ ಕಡೆಗೆ 500 ಮೀಟರ್ ಅಂತರ, ಉತ್ತರಕ್ಕೆ ಸುವರ್ಣ ಗಾರ್ಡನ್ ಕಲ್ಯಾಣ ಮಂಟಪದವರೆಗೆ 500 ಮೀಟರ್, ಪಶ್ಚಿಮಕ್ಕೆ ರಾಷ್ಟ್ರೀಯ ಹೆದ್ದಾರಿಯ ಆಚೆಗೆ ಇರುವ ಸಂಪೂರ್ಣ ಗಾರ್ಡನ್ ಹೊಟೇಲ್‌ವರೆಗೆ 500 ಮೀಟರ್ ಅಂತರ ಹಾಗೂ ದಕ್ಷಿಣ ದಿಕ್ಕಿನ ಕಡೆಗೆ ಟೊಯೊಟಾ ಶೋರೂಮ್‌ವರೆಗೆ 500 ಮೀಟರ್ ಅಂತರದಲ್ಲಿ ಡಿ.1ರಿಂದ 30ರವರೆಗೆ ಈ ನಿಷೇಧಾಜ್ಞೆ ಇರಲಿದೆ.

ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಅಪಾಯ ಉಂಟು ಮಾಡಬಹುದಾದ ಯಾವುದೇ ವಸ್ತು, ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರಪದಾರ್ಥ(ಸ್ಪೋಟ್‌ ಗೊಳ್ಳಬಹುದಾದ ಅಥವಾ ಬೆಂಕಿಕಾರಕ ಪದಾರ್ಥಗಳು), ಪಟಾಕಿ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಹಿಸಬಲ್ಲ ವಸ್ತುಗಳು ಇತ್ಯಾದಿಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಭಾಷಣ, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ.

ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡುವುದು, ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ತಡೆ ಒಡ್ಡಿ ಹೆದ್ದಾರಿಯಲ್ಲಿ ಒಡಾಡುತ್ತಿರುವ ಅವಶ್ಯಕ ರೋಗಿಗಳನ್ನು ಸಾಗಿಸುವ ಆಂಬುಲೆನ್ಸ್ ಹಾಗೂ ಇತರ ಅವಶ್ಯಕ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ತಡೆದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ರಾಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...