ಬೆಳಗಾವಿ | ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ವಿರುದ್ದ ಪ್ರತಿಭಟನೆ

Date:

ಬೆಳಗಾವಿ ನಗರದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿದ ಜಾಮರ್‌ನ ಮಿತಿ ಕಡಿಮೆಗೊಳಿಸಿ, ಸುತ್ತಲಿನ ವಾಸಸ್ಥಳದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು’ ಎಂದು ಆಗ್ರಹಿಸಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಕಾರಾಗೃಹದ ಮುಂದಿನ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಬೆಳಗಾವಿಯಿಂದ ಬಾಚಿಗೆ ಹೋಗುವಾಗ ಮುಖ್ಯರಸ್ತೆಗೆ ಹೊಂದಿಕೊಂಡೇ ಕಾರಾಗೃಹವಿದೆ. ಅಲ್ಲಿ ಮೊಬೈಲ್ ಬಳಕೆ ತಡೆಯುವ ಸಲುವಾಗಿ ಜಾಮ‌ರ್ ಅಳವಡಿಸಲಾಗಿದೆ. ಆದರೆ, ಕಾರಾಗೃಹದ ಸುತ್ತಲಿನ ಜನವಸತಿಗಳ ಮೇಲೂ ಅದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಗ್ರಾಮ ಪಂಚಾಯಿತಿ ಕಟ್ಟಡ, ಶಾಲೆ ಮತ್ತು ಬ್ಯಾಂಕ್‌ನಲ್ಲೂ ಆನ್‌ಲೈನ್ ಕೆಲಸಗಳಿಗೆ ತೊಡಕಾಗುತ್ತಿದೆ’ ಎಂದು ದೂರಿದರು.

ಕಾರಾಗೃಹದಲ್ಲಿ ಅಳವಡಿಸಿದ ಜಾಮರ್‌ನಿಂದಾಗಿ ನಮ್ಮ ಮೊಬೈಲ್‌ ಫೋನ್‌ಗೆ ನೆಟ್‌ವರ್ಕ್‌ ಸಿಗುತ್ತಿಲ್ಲ. ಇದರಿಂದಾಗಿ ಸಂವಹನಕ್ಕೆ ತೊಂದರೆಯಾಗಿದೆ. ಆದರೆ, ಕಾರಾಗೃಹದ ಅಧಿಕಾರಿಗಳು ನಮ್ಮ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...