ಬೆಳಗಾವಿ | ಟ್ರ್ಯಾಕ್ಟರ್‌, ಡಿಜೆ ಸೌಂಡ್‌ ವಿರುದ್ಧ ಹೋರಾಟ: ಜಿಲ್ಲಾಧಿಕಾರಿ ಸೇರಿ 5 ಜನ ಅಧಿಕಾರಿಗಳ ಮೇಲೆ ಲೋಕಾಯುಕ್ತಕ್ಕೆ ದೂರು

Date:

ಉತ್ತರ ಕರ್ನಾಟಕ ಭಾಗದಲ್ಲಿ ಟ್ರ್ಯಾಕ್ಟರ್‌ಗಳು ಸೇರಿದಂತೆ ಇತರೆ ವಾಹನಗಳಿಗೆ ಅಳವಡಿಸಿರುವ ಅನಧಿಕೃತ ‘ಡಿಜೆ ಸೌಂಡ್‌’ ವ್ಯವಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಬಾ. ಪಾಟೀಲ್‌ ನಾಲ್ಕು ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದಾರೆ.

1001494490

ಆದರೆ, ಈ ಕುರಿತು ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಪಂದಿಸಿಲ್ಲವೆಂದು ಆರೋಪಿಸಿ, ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಐದು ಮಂದಿ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಅವರಿಗೆ ದೂರು ಸಲ್ಲಿಸಲಾಗಿದೆ.

ಅಕ್ರಮ ಡಿಜೆ ಸೌಂಡ್‌ನಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ರೋಗಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಶಬ್ದ ಮಾಲಿನ್ಯ ಹೆಚ್ಚಾಗಿ ಶಾಂತಿ ಭಂಗವಾಗುತ್ತಿದೆ. ಇದಲ್ಲದೆ, ಕೆಲವು ಅಪಘಾತಗಳಿಗೆ ಸಹ ಇದು ಕಾರಣವಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಆರೋಪಿ ಅಧಿಕಾರಿಗಳ ಪಟ್ಟಿ

ಯೋಗೀಶ್ ಎ.ಎಂ. – ಸಾರಿಗೆ ಆಯುಕ್ತರು, ಬೆಂಗಳೂರು

ಕೆ.ಟಿ. ಹಾಲಸ್ವಾಮಿ – ಹೆಚ್ಚುವರಿ ಸಾರಿಗೆ ಆಯುಕ್ತರು, ಧಾರವಾಡ

ಸಿದ್ದಪ್ಪ ಕಲ್ಲೆರ್ – ಜಂಟಿ ಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗ

ಮೊಹಮ್ಮದ್ ರೋಶನ್ – ಜಿಲ್ಲಾಧಿಕಾರಿ, ಬೆಳಗಾವಿ

ಬಸವರಾಜ ಬಾಗಲ – ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ರಾಮದುರ್ಗ

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಅಂತರಾಜ್ಯ ಕಳ್ಳರ ಬಂಧನ: ಲಕ್ಷ ರೂಪಾಯಿ ಮೌಲ್ಯದ ಆಭರಣ ವಶ

“ನಾಲ್ಕು ತಿಂಗಳಿಂದ ಮನವಿ ಹಾಗೂ ಪ್ರತಿಭಟನೆ ನಡೆಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ” ಎಂದು ಶ್ರೀನಿವಾಸಗೌಡ ಪಾಟೀಲ್‌ ಈ ದಿನ.ಕಾಮ್ ಜತೆ ಮಾತನಾಡಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...