ಬೆಳಗಾವಿ | ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರಿಗೆ ಗೌರವ ನೀಡಬೇಕು: ಎಸ್​​ಪಿ ಕೆ ರಾಮರಾಜನ್

Date:

​ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರಿಗೆ ಗೌರವ ನೀಡಬೇಕು. ಸಾರ್ವಜನಿಕರು ಬಂದ ಕೂಡಲೇ ಅವರನ್ನು ಕೂರಿಸಿ, ನಿಧಾನವಾಗಿ ಅವರ ಸಮಸ್ಯೆಗಳನ್ನು ಕೇಳಿಸಿಕೊಳ್ಳಬೇಕು. ಯಾವುದೇ ಹಂತದ ಪೊಲೀಸ್ ಸಿಬ್ಬಂದಿ(ಕಾನ್‌ಸ್ಟೆಬಲ್‌ನಿಂದ ಹಿಡಿದು ಅಧಿಕಾರಿಗಳವರೆಗೆ) ಸಾರ್ವಜನಿಕರ ಮೇಲೆ ಕೂಗಾಡುವುದು ಅಥವಾ ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಸಹಿಸುವುದಿಲ್ಲ ಎಂದು ಬೆಳಗಾವಿ ಎಸ್​​ಪಿ ಕೆ ರಾಮರಾಜನ್ ಕಟ್ಟುನಿಟ್ಟಾಗಿ ಹೇಳಿದರು.

ನೂತನವಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅಥಣಿ ಪೊಲೀಸ್​ ಠಾಣೆಗೆ ಭೇಟಿ ನೀಡಿ ಮಾತನಾಡಿ, ​”ಕಾನೂನು ರೀತಿಯಲ್ಲಿ ಬಂಧಿಸಬೇಕಿದ್ದರೆ ಬಂಧಿಸಿ. ಆದರೆ ತನಿಖೆಯು ಗುಣಮಟ್ಟದಿಂದ ಕೂಡಿರಬೇಕು. ಬೈಯುವುದು ಅಥವಾ ಬೆದರಿಸುವುದು ಇಲಾಖೆಯ ಕೆಲಸವಲ್ಲ” ಎಂದರು.

​”ಯಾರಾದರೂ ಪೊಲೀಸರು ಅಥವಾ ಇತರ ಇಲಾಖೆಯವರು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿದರೆ, ತಕ್ಷಣ ದೂರು ನೀಡಲು ಅವಕಾಶವಿದೆ. ಇಲ್ಲಿ ​ನಿಮ್ಮ ಗೌರವ ಬಿಟ್ಟುಕೊಡುವ ಅಗತ್ಯವಿಲ್ಲ. ಠಾಣೆಯಲ್ಲಿ ದೂರು ಸ್ವೀಕರಿಸದಿದ್ದರೆ ಅಥವಾ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮೇಲಧಿಕಾರಿಗಳ ಕಚೇರಿಗೆ ಬಂದು ದೂರು ನೀಡಬಹುದು” ಎಂದು ಎಸ್‌ಪಿ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“​ಅಥಣಿ ಭಾಗದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ 68 ಮಂದಿ ಮೃತಪಟ್ಟಿದ್ದಾರೆ. ​ಕುಡಿದು ವಾಹನ ಚಲಾಯಿಸಿ ಅಮಾಯಕರ ಸಾವಿಗೆ ಕಾರಣರಾದವರ ಮೇಲೆ ಕೊಲೆಗೆ ಸಮಾನವಾದ ಕಠಿಣ ಪ್ರಕರಣ ದಾಖಲಿಸಲಾಗುವುದು. ಅಪ್ರಾಪ್ತರು ವಾಹನ ಚಾಲನೆ ಮಾಡಲು ಯಾವುದೇ ಕಾರಣಕ್ಕೂ ಅವಕಾಶವಿಲ್ಲ” ಎಂದರು.

“​ಗಾಂಜಾ ಸೇವನೆ ಪತ್ತೆ ಹಚ್ಚಲು ಆಧುನಿಕ ‘ಗಾಂಜಾ ಟೆಸ್ಟ್ ಕಿಟ್’ಗಳನ್ನು ಎಲ್ಲ ಠಾಣೆಗಳಿಗೂ ನೀಡಲಾಗುತ್ತಿದೆ. ಇದರಿಂದ ತಕ್ಷಣವೇ ಪತ್ತೆಹಚ್ಚಲು ಸಾಧ್ಯವಾಗುತ್ತದೆ. ​ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕೂಡಲೇ ದಾಳಿ ಮಾಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮ ಬಾಂಗ್ಲಾ ವಲಸಿಗರ ಬಂಧನ: ಎರಡು ವರ್ಷಗಳ ಸಜೆ, ₹10,000 ದಂಡ ವಿಧಿಸಿ ನ್ಯಾಯಾಲಯ ಆದೇಶ

“ಮಟ್ಕಾ ದಂಧೆಯಲ್ಲಿ ಕೇವಲ ಸಣ್ಣಪುಟ್ಟ ವ್ಯಕ್ತಿಗಳಲ್ಲದೆ, ಇದರ ಹಿಂದೆ ಹಣ ಹೂಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ​ಆನ್‌ಲೈನ್‌ನಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಆಸೆಗೆ ಬಿದ್ದು, ಜನ ಸೈಬರ್ ಕ್ರೈಂಗೆ ಬಲಿಯಾಗುತ್ತಿದ್ದಾರೆ. ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ನಡೆಯುವ ವಂಚನೆಗಳ ಬಗ್ಗೆ ಜನರು ಲಾಜಿಕಲ್ ಆಗಿ ಯೋಚಿಸಿ, ಎಚ್ಚರದಿಂದ ಇರಬೇಕು” ಎಂದು ಎಸ್‌ಪಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...