ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಚುನಾವಣೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಗಣೇಶ ಚತುರ್ಥಿ ಮುಗಿದ ಬಳಿಕ ಚುನಾವಣಾ ಸಂಬಂಧ ಸಭೆ, ಸಮಾರಂಭಗಳನ್ನು ಪ್ರಾರಂಭಿಸಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನ್ಯಾ.ವರ್ಮ ವಿರುದ್ಧದ ಆರೋಪ: ತನಿಖಾ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ನ್ಯಾ.ಗಣಪತಿ ಭಟ್ ನೇಮಕ
ಹುಕ್ಕೇರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಆಣೆ–ಪ್ರಮಾಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಚುನಾವಣಾ ಸಮಯದಲ್ಲಿ ಆಣೆ, ಪ್ರಮಾಣ ಮಾಡುವುದು ಸಾಮಾನ್ಯ. ಮತದಾರರು ಯಾರ ಮೇಲೆ ವಿಶ್ವಾಸ, ಪ್ರೀತಿ ಇಟ್ಟಿರುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ” ಎಂದು ಹೇಳಿದರು.





