ಬೆಳಗಾವಿ | ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಕಠಿಣ ಕಾರಾಗೃಹ

Date:

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಬೆಳಗಾವಿ ತಾಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ್ ಬೋಸಲೆ (22) ಶಿಕ್ಷೆಗೆ ಒಳಗಾದ ಆರೋಪಿಯಾಗಿದೆ. 2025ರ ಏಪ್ರಿಲ್ 10ರಂದು ಬಾಲಕಿಗೆ ಲಡ್ಡು ಕೊಡುತ್ತೇನೆ ಎಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಹಗ್ಗದಿಂದ ಕಟ್ಟಿಹಾಕಿ ಅತ್ಯಾಚಾರ ಎಸಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುತ್ತೇನೆ, ನಿನ್ನಂತೆಯೇ ನಿನ್ನ ಅಕ್ಕನಿಗೂ ಇದೇ ರೀತಿಯ ಕೃತ್ಯ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೊಮ್ಮೆ ಬಾಲಕಿಯನ್ನು ಕರೆದಾಗ ಅವಳು ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವಳ ಕೂದಲು ಹಿಡಿದು ಎಳೆದುಕೊಂಡು ಹೋಗಿ ಇಟ್ಟಿಗೆಯಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...