ಬೆಳಗಾವಿ | ಮಾರಕಾಸ್ತ್ರ ತೋರಿಸಿ ದರೋಡೆ: 4 ಗಂಟೆಯಲ್ಲಿ ಆರೋಪಿಯ ಬಂಧನ

Date:

ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದ ಆರೋಪಿಯನ್ನು ಕೇವಲ ನಾಲ್ಕು ಗಂಟೆಗಳಲ್ಲೇ ಬಂಧಿಸುವ ಮೂಲಕ ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಉಗಾರ ಬಿ.ಕೆ. ಗ್ರಾಮದ ನಿವಾಸಿ ಶಾಂತು ಅವಳೆಕರ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ ಆರೋಪಿಯು ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿ ಸುಮಾರು ₹2,81,280 ಹಣವನ್ನು ದರೋಡೆ ಮಾಡಿದ್ದಾನೆ. ಈ ಕುರಿತು ಶಾಂತು ಅವಳೆಕರ ಕಾಗವಾಡ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರು.

ದೂರು ದಾಖಲಾದ ತಕ್ಷಣವೇ ಕಾಗವಾಡ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ತಂಡ ರಚಿಸಿ ಆರೋಪಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ನಾಲ್ಕು ಗಂಟೆಗಳಲ್ಲೇ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ದಾಖಲಾದ ತಕ್ಷಣವೇ ಕಾಗವಾಡ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ತಂಡ ರಚಿಸಿ ಆರೋಪಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದರು. ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ನಾಲ್ಕು ಗಂಟೆಗಳಲ್ಲೇ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಸಾಗರ ಸನದಿ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ದರೋಡೆಗೆ ಬಳಸಿದ ಮಾರಕಾಸ್ತ್ರ ಹಾಗೂ ದರೋಡೆ ಮಾಡಿದ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸೋಶಿಯಲ್ ಮೀಡಿಯಾ ಹನಿಟ್ರ್ಯಾಪ್ ಜಾಲ: ಮಹಿಳೆಯ ಬಂಧನ, ಸಹಚರ ಪರಾರಿ

ಕಾಗವಾಡ ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಕಡಿಮೆ ಅವಧಿಯಲ್ಲಿ ಆರೋಪಿಯನ್ನು ಬಂಧಿಸಿರುವುದು ಪೊಲೀಸ್‌ ಇಲಾಖೆಯ ಚುರುಕು ಕಾರ್ಯಕ್ಕೆ ಉದಾಹರಣೆಯಾಗಿದೆ ಎಂದು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...