ಬೆಳಗಾವಿ | ವಾಹನಗಳ ಅಕ್ರಮ ಡಿಜೆ ಸೌಂಡ್‌ ತೆರವುಗೊಳಿಸಲು ಆಗ್ರಹಿಸಿ ಆರ್‌ಟಿಒ ಕಚೇರಿ ಮುಂದೆ ಸತ್ಯಾಗ್ರಹ

Date:

ಉತ್ತರ ಕರ್ನಾಟಕ ಭಾಗದಲ್ಲಿ ಟ್ರ್ಯಾಕ್ಟರ್‌ಗಳು ಸೇರಿದಂತೆ ವಿವಿಧ ವಾಹನಗಳಿಗೆ ಅಳವಡಿಸಿರುವ ಅನಧಿಕೃತ ಹಾಗೂ ಅತಿಯಾದ ಶಬ್ದ ಮಾಲಿನ್ಯ ಉಂಟುಮಾಡುವ ‘ಡಿಜೆ ಸೌಂಡ್‌’ ವ್ಯವಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ್ ಅವರು ಸೋಮವಾರದಿಂದ ಬೆಳಗಾವಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಹೋರಾಟಗಾರರ ಪ್ರಕಾರ, ಈ ಅಕ್ರಮ ಡಿಜೆ ಸೌಂಡ್ ವ್ಯವಸ್ಥೆಗಳಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ರೋಗಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಂಟಾಗುತ್ತಿರುವ ಶಬ್ದ ಮಾಲಿನ್ಯದಿಂದ ಶಾಂತಿಗೆ ಭಂಗ ಉಂಟಾಗುತ್ತಿದ್ದು, ಕೆಲವೊಮ್ಮೆ ರಸ್ತೆ ಅಪಘಾತಗಳಿಗೂ ಕಾರಣವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿರುವ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಕಲ್ಲೇ‌ರ್, ಸಂಬಂಧಪಟ್ಟ ಆರ್‌ಟಿಒ ಅಧಿಕಾರಿಗಳು ಹಾಗೂ ಮೋಟಾರು ವಾಹನ ನಿರೀಕ್ಷಕರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಕರ್ನಾಟಕದಾದ್ಯಂತ ವಾಹನಗಳಿಗೆ ಅಳವಡಿಸಿರುವ ಅನಧಿಕೃತ ಡಿಜೆ ಸೌಂಡ್ ಮತ್ತು ಲೈಟಿಂಗ್ ವ್ಯವಸ್ಥೆಗಳನ್ನು ಕೂಡಲೇ ತೆರವುಗೊಳಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.

ಇತ್ತೀಚೆಗೆ ನಡೆದ ಕೆಲ ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗಿರುವ ಅಕ್ರಮ ಸೌಂಡ್‌ ಸಿಸ್ಟಮ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಸಾರಿಗೆ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್‌ ಆದೇಶ, ಮೋಟಾರು ವಾಹನ ಕಾಯ್ದೆ ಹಾಗೂ ಪರಿಸರ ಸಂರಕ್ಷಣಾ ಕಾಯ್ದೆಗಳನ್ನು ಉಲ್ಲಂಘಿಸಿರುವ ವಾಹನ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಆರ್‌ಟಿಒ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೋರಾಟಗಾರರು ದೂರಿದರು. ತಮ್ಮ ಬೇಡಿಕೆಗಳು ಈಡೇರುವವರೆಗೆ ಧರಣಿ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...