ಬೆಳಗಾವಿ ಅಧಿವೇಶನ ‘ಟೂರಿಂಗ್ ಟಾಕೀಸ್’ ಆಗಿದೆ : ರಮೇಶ ಕತ್ತಿ

Date:

ಜನರ ಭಾವನೆಗಳಿಗೆ ಸ್ಪಂದಿಸುವ ಸರ್ಕಾರಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಆದರೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನ ಇದೀಗ ಕೇವಲ ‘ಟೂರಿಂಗ್ ಟಾಕೀಸ್’ ಆಗಿ ಮಾರ್ಪಟ್ಟಿದೆ ಎಂದು ಮಾಜಿ ಸಂಸದ ರಮೇಶ ಕತ್ತಿ ಆರೋಪಿಸಿದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಯ ಉದ್ದೇಶದಿಂದ 2006ರಿಂದ ಇಲ್ಲಿವರೆಗೆ 13 ಬಾರಿ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನಗಳು ನಡೆದಿವೆ. ಪ್ರಸ್ತುತ 14ನೇ ಅಧಿವೇಶನವೂ ಅರ್ಧದಷ್ಟು ಪೂರ್ಣಗೊಂಡಿದ್ದು, ಈ ಅಧಿವೇಶನಗಳಿಂದ ಉತ್ತರ ಕರ್ನಾಟಕದ ಜನರಿಗೆ ಯಾವ ರೀತಿಯ ಪ್ರಯೋಜನವಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುವ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸುತ್ತಮುತ್ತಲ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಅವಲೋಕಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದಲ್ಲಿ ಮಾತ್ರ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ಸಾಧ್ಯ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಧ್ವನಿ ಎತ್ತುವ ಜನಪ್ರತಿನಿಧಿಗಳನ್ನು ವೈರಿಗಳಂತೆ ಕಾಣುವ ಧೋರಣೆ ಎಲ್ಲಾ ಪಕ್ಷಗಳಲ್ಲೂ ಇದೆ. ಇದು ಬದಲಾಗಬೇಕು. ಈ ಭಾಗದ ಜನರಲ್ಲಿನ ಆಶಾವಾದ ವರ್ಷದಿಂದ ವರ್ಷಕ್ಕೆ ಕ್ಷೀಣಗೊಳ್ಳುತ್ತಿದೆ. ಆದ್ದರಿಂದ ಎಲ್ಲ ಪಕ್ಷಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಗ್ಗಟ್ಟಾಗಿ ತಮ್ಮ ವಾದ ಮಂಡಿಸಿ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಕತ್ತಿ ಕರೆ ನೀಡಿದರು.

ಜಿಲ್ಲೆ ವಿಭಜನೆಗೆ ಒತ್ತಾಯ

ಬೆಳಗಾವಿ ಜಿಲ್ಲೆಯ ವಿಭಜನೆಗೆ ಸಂಬಂಧಿಸಿದಂತೆ ಮಠಾಧೀಶರು, ಹಿರಿಯರು, ನಾಯಕರು, ಹಾಲಿ ಹಾಗೂ ಮಾಜಿ ಶಾಸಕರು, ಸಂಸದರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಸಭೆಗಳನ್ನು ನಡೆಸಬೇಕು. ಕಾನೂನು ತಜ್ಞರ ಸಲಹೆ ಪಡೆದು ಭೌಗೋಳಿಕವಾಗಿ ಜನರಿಗೆ ಅನುಕೂಲವಾಗುವ ಪ್ರದೇಶಗಳನ್ನು ಜಿಲ್ಲಾ ಕೇಂದ್ರಗಳಾಗಿ ಘೋಷಿಸುವ ಮೂಲಕ ಸರ್ಕಾರ ಚಳಿಗಾಲದ ಅಧಿವೇಶನಕ್ಕೆ ಸಾರ್ಥಕತೆ ತರುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಯುವ ಧುರೀಣ ವಿನಯ ಪಾಟೀಲ, ಬಸವಣ್ಣಿನಾಗನೂರಿ, ಪ್ರಶಾಂತ ಪಾಟೀಲ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...