ಬೆಳಗಾವಿ | ಸಿದ್ದರಾಮಯ್ಯನವರಿಗೆ ಕಾಮಾಲೆ ರೋಗ ಬಂದಿದೆ :ಅರವಿಂದ ಬೆಲ್ಲದ

Date:

ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ಕಾಮಾಲೆ ರೋಗ ಬಂದಿದೆ. ನಾವು ಮೋದಿ ಅವರ ಸಾಧನೆ ಬಿಚ್ಚಿಡುತ್ತೇವೆ. ಅವರು ಕಣ್ಣೆರೆದು ನೋಡಲಿ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಬೆಳಗಾವಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ಭ್ರಷ್ಟಾಚಾರವನ್ನೇ ಸಾಧನೆ ಎಂದು ಹೇಳಿಕೊಂಡು ತಿರುಗುವ ಸಿದ್ದರಾಮಯ್ಯ ಅವರಿಗೆ ಮೋದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಮೋದಿ ಅವರ ಅವಧಿಯಲ್ಲಿ ದೇಶದ ಹೊಸ ಇತಿಹಾಸ ರಚನೆಯಾಗಿದೆ. ಉತ್ತಮ ಆಡಳಿತ, ಬಲಿಷ್ಠ ದೇಶ ನಿರ್ಮಾಣ, ಮೂಲಸೌಲಭ್ಯ, ಆಧುನಿಕ ಭಾರತ ನಿರ್ಮಾಣ ಸೇರಿ ಗಮನಾರ್ಹ ಸುಧಾರಣೆ ಕಂಡಿದೆ’ ಎಂದರು.

‘ಮಹಾದಾಯಿ ಯೋಜನೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ಇದಕ್ಕೆ ತಡೆಗೋಡೆ ಕಟ್ಟಿದ್ದು ಕಾಂಗ್ರೆಸ್ ಸರ್ಕಾರ. ತಡೆಗೋಡೆ ಕಟ್ಟುವ ಅವಶ್ಯಕತೆ ಇರಲಿಲ್ಲ. ಇದರಿಂದ ನೈಸರ್ಗಿಕವಾಗಿ ಬರುತ್ತಿದ್ದ ನೀರೂ ಕರ್ನಾಟಕಕ್ಕೆ ಬರುತ್ತಿಲ್ಲ. ಮಹದಾಯಿ ಅನುಷ್ಠಾನವಾದರೆ ಎಲ್ಲರಿಗೂ ಅನುಕೂಲ. ಇದಕ್ಕೆ ಕೇಂದ್ರ ಸರ್ಕಾರವೇ ತಡೆಯೊಡ್ಡಿದೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಲೇ ಇದ್ದಾರೆ. ಅದು ಸುಳ್ಳು’ ಎಂದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...