ಬೆಳಗಾವಿ | ಮನೆಗಾಗಿ ಹಣ ಪಡೆದು ವಂಚನೆ; ಸ್ಲಮ್ ಬೋರ್ಡ್‌ ಮೇಲೆ ಆರೋಪ

Date:

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆ ಕಟ್ಟಿಸಿಕೊಡುವುದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸ್ಲಮ್‌ ನಿವಾಸಿಗಳಿಂದ 25ಸಾವಿರ ರೂ. ಹಣ ಪಡೆದು ವಂಚನೆ ಮಾಡಿದ್ದಾರೆಂದು ಮಂಡಳಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕೂಡಿಯ ಸ್ಲಮ್ ನಿವಾಸಿಗಳು ಬೀದಿಗಿಳಿದು ಪ್ರತಿಭಟಿಸಿದ್ದಾರೆ.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಚಿಕ್ಕೋಡಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸ್ಲಮ್ ನಿವಾಸಿಗಳಿಗೆ ಮನೆಗಳು ಮಂಜೂರಾಗಿದ್ದವು. ಇದಕ್ಕಾಗಿ 25ಸಾವಿರ ರೂ. ಹಣ ಪಾವತಿಸಿಕೊಂಡಿದ್ದ ಸ್ಲಮ್ ಬೋರ್ಡ್ ಅಧಿಕಾರಿಗಳು ಮನೆ ಕಟ್ಟಿಸಿಕೊಡದೇ ಮೋಸ ಮಾಡಿದ್ದಾರೆ. ಸ್ಲಮ್ ಬೋರ್ಡ್​ನಲ್ಲಿ ವ್ಯಾಪಕ ಅವ್ಯವಹಾರ ನಡೆದಿದ್ದು ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನು ಕೆಲವು ಮನೆಗಳನ್ನು ಅರ್ಧ ಮಾಡಿ ಬಿಟ್ಟ ಆರೋಪ ಸಹ ಕೇಳಿ ಬಂದಿದೆ. ಚಿಕ್ಕೋಡಿಯ ಮಾತಂಗಿಕೇರಿಯಲ್ಲಿ 50ಕ್ಕೂ ಹೆಚ್ಚು ಫಲಾನುಭವಿಗಳು ಮನೆ ಕಟ್ಟಿಸಿಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ 07ಸ್ಲಮ್‌ಗಳಲ್ಲಿ 449ಫಲಾನುಭವಿಗಳ ಗುರುತಿಸಿ ಮನೆ ಕಟ್ಟಿಸಿಕೊಡಲು ಯೋಜನೆ ರೂಪಿಸಲಾಗಿತ್ತು.  ಯೋಜನೆಯ ನಿಯಮದಂತೆ ಪ್ರಾರಂಭದ ಹಂತದಲ್ಲಿನ ಫಲಾನುಭವಿಗಳಿಗೆ 25ಸಾವಿರ ರೂ. ಡಿಡಿ ಕಟ್ಟಲು ಸೂಚಿಸಲಾಗಿತ್ತಂತೆ. ತಮಗೂ ಒಂದು ಸೂರು ಆಗುತ್ತೆ ಎಂಬ ಆಸೆಯಲ್ಲಿ ಚಿಕ್ಕೋಡಿ ನಗರದ ಮಾತಂಗಿಕೇರಿಯ ನಿವಾಸಿಗಳು ಸಾಲ ಸೋಲ ಮಾಡಿ 25ಸಾವಿರ ರೂ. ಹಣ ಪಾವತಿಸಿದ್ದರು. ಆದರೆ, 2019ರಲ್ಲಿ ಹಣ ಪಾವತಿಸಿದರೂ ಈವರೆಗೂ ಮನೆ ಕಟ್ಟಿಕೊಟ್ಟಿಲ್ಲ.

ತಾವೆಲ್ಲ ಬಡ ಕೂಲಿ ಕಾರ್ಮಿಕರು, ಸಾಲ ಸೋಲ ಮಾಡಿ 25ಸಾವಿರ ರೂ. ಪಾವತಿ ಮಾಡಿದ್ದೇವೆ. ಆದರೆ, ನಾಲ್ಕು ವರ್ಷ ಕಳೆದರೂ ಮನೆ ನಿರ್ಮಾಣ ಮಾಡಿಕೊಡುತ್ತಿಲ್ಲ. ಮಾತಂಗಿ ಕೇರಿ ಸೇರಿದಂತೆ ಒಟ್ಟು ಏಳು ಸ್ಲಮ್‌ಗಳಿವೆ. ಈ ಎಲ್ಲಾ ಪ್ರದೇಶಗಳಲ್ಲಿಯೂ ಫಲಾನುಭವಿಗಳು ಇದ್ದು ಬಹುತೇಕ ಮನೆಗಳು ಪೂರ್ಣಗೊಳ್ಳದೇ ಇದ್ದರೂ ಪೂರ್ಣಗೊಂಡಿವೆ ಎಂದು ದಾಖಲೆ ಸಲ್ಲಿಸಲಾಗಿದೆ. ಎಂದು ಬೆಳಗಾವಿಯ ಸ್ಲಂ ಬೋರ್ಡ್ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ.

ಆರ್​ಟಿಐ ಕಾರ್ಯಕರ್ತ ಮತ್ತು ಮಾತಂಗಿಕೇರಿಯ ನಿವಾಸಿಯೂ ಆಗಿರುವ ಅನಿಲ್ ಧಾವಣೆ ಆರ್ ಟಿಐನಡಿ ಮಾಹಿತಿ ಕೇಳಿದಾಗ 188 ಮನೆಗಳು ಪೂರ್ಣಗೊಂಡಿವೆ ಎಂಬ ದಾಖಲಾತಿ ನೀಡಿದ್ದಾರೆ. ಆದರೆ, ಮಾತಂಗಿಕೇರಿ ಸ್ಲಮ್ ಒಂದರಲ್ಲೇ 10ಕ್ಕೂ ಹೆಚ್ಚು ಮನೆಗಳು ಇನ್ನೂ ಪೂರ್ಣಗೊಂಡಿಲ್ಲ. ಪೂರ್ಣಗೊಂಡಿದೆ ಎಂದು ದಾಖಲೆ ನೀಡಿದ್ದಾರೆ ಎಂದು ಅನಿಲ್ ಧಾವಣೆ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...