ಬೆಳಗಾವಿ | ರಾಮದುರ್ಗ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಅನುದಾನ: ಅಶೋಕ ಪಟ್ಟಣ

Date:

ಅಶೋಕ ಪಟ್ಟಣ ಅವರ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ ಪಟ್ಟಣ
ಈತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ಕ್ಷೇತ್ರಕ್ಕೆ ಸಾರಿಗೆ, ಶಿಕ್ಷಣ, ನೀರಾವರಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಿಶೇಷ ಅನುದಾನ ಕುರಿತು ತಿಳಿಸಿದರು.

ಕುದರೆ ಬಯಲು ಮೈದಾನದಲ್ಲಿ ರೂ. 30 ಕೋಟಿ ವೆಚ್ಚದ ಸುಸಜ್ಜಿತ ನೂತನ ಬಸ್ ನಿಲ್ದಾಣಕ್ಕೆ ಮಂಜೂರಾತಿ, ನೋದಾಯಿತ ಕಾರ್ಮಿಕ ಮಕ್ಕಳ ಶಿಕ್ಷಣಕ್ಕೆ ರೂ. 40 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು

ತಾಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಿಸಲು ರೂ. 9 ಕೋಟಿ ಅನುದಾನ ದೊರೆತಿದೆ. ಹಂಪಿಹೋಳಿ ಗ್ರಾಮದ ಹತ್ತಿರ ರೂ. 126 ಕೋಟಿ ವೆಚ್ಚದ ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಕೂಡಲೇ ಕಾಮಗಾರಿ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಶಕಗಳಿಂದ ನೆನೆಗುದಿಗೆ ಬಿದ್ದ ಶ್ರೀ ವೀರಭದ್ರೇಶ್ವರ ಹಾಗೂ ಬಸವೇಶ್ವರ ಏತ ನೀರಾವರಿ ಕಾಮಗಾರಿ ಮುಂದುವರೆಸಲು ಬಜೆಟ್‌ನಲ್ಲಿ ಅನುಮೋದನೆ ದೊರೆತಿದೆ. ರೂ.350 ಕೋಟಿ ವೆಚ್ಚದ ಶ್ರೀವೀರಭದ್ರೇಶ್ವರ ಏತ ನೀರಾವರಿ ಕಾಮಗಾರಿ
ವಿಳಂಬಕ್ಕೆ ಗುತ್ತಿಗೆದಾರ ಕಾರಣಾಗಿದ್ದು, ಬೇರೆ ಗುತ್ತಿಗೆದಾರನಿಗೆ ಕೆಲಸ ನಿರ್ವಹಿಸಿ ಪುನಃ ಕಾಮಗಾರಿ ಆರಂಭಿಸಲಾಗುವುದು. ಹಾಗೂ ಸಾಲಾಪೂರ ಬಸವೇಶ್ವರ ಏತ ನೀರಾವರಿ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಡಿಸೆಂಬ‌ರ್ ವೇಳೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕೆರೆ ತುಂಬಿಸುವ ಯೋಜನೆ: ರೂ. 85 ಕೋಟಿ

ವೆಚ್ಚ ಅನುದಾನದಲ್ಲಿ ತಾಲೂಕಿನ ಚಂದರಗಿ, ಮುರಕಟ್ನಾಳ, ತೋರಣಗಟ್ಟಿ, ಕಟಕೋಳ ಸೇರಿದಂತೆ ಒಟ್ಟು 8 ಕೆರೆಗಳಿಗೆ ಮಲಪ್ರಭಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ಅನುದಾನ ದೊರೆತಿದ್ದು, ಶೀಘ್ರ ಕಾಮಗಾರಿ ಆರಂಭಿಸಿ, ದನಕರುಗಳಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು.

ತಾಲೂಕಿನ ರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 0.50 ಕೋಟಿ ಮಂಜೂರಾತಿ ದೊರೆತಿದ್ದು, ರೂ. 37 ಕೋಟಿ

ಅನುದಾನ ವಿವಿಧ ರಸ್ತೆಗಳ ಕಾಮಗಾರಿಗಳಿಗೆ ಹಾಗೂ ರೂ.13 ಕೋಟಿ ಅನುದಾನ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಬಳಕೆ ಮಾಡಲಾಗುವುದು.

ತಾಲೂಕಿನ ಸಾಲಾಪೂರ, ಮುದೇನೂರ ಗ್ರಾಮದಲ್ಲಿ ನೂತನ 110 ಕೆವಿ ಪರಿವರ್ತಕ ಘಟಕ ಸ್ಥಾಪನೆಗೆ ತಲಾ ರೂ.25 ಕೋಟಿ ಅನುದಾನ ದೊರೆತಿದೆ. ಸವದತ್ತಿ ತಾಲೂಕು ಶಿರಸಂಗಿ ಹಂಚು ಕಾಲುವೆ ಮೂಲಕ ತಾಲೂಕಿನ ಕಡ್ಲಿಕೊಪ್ಪ, ಮುಳ್ಳೂರ, ಜಾಲಿಕಟ್ಟಿ, ರೇವಡಿಕೊಪ್ಪ ಹಾಗೂ ಶಿವಪೇಟೆ ಗ್ರಾಮಗಳಿಗೆ ನೀರಾವರಿ ಯೋಜನೆ ಕಲ್ಪಿಸಲು ರೂ. 94 ಕೋಟಿ ವೆಚ್ಚದ ಕಾಮಗಾರಿಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿಯಲ್ಲಿ ₹97.49 ಲಕ್ಷ ಕಾಣಿಕೆ

ಪತ್ರಿಕಾಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಬಿ. ರಂಗನಗೌಡ್ರ, ಕಾಂಗ್ರೆಸ್ ಮುಖಂಡರಾದ ಸುರೇಶ ಫತೇಪೂರ, ಶ್ರೀ ಪ್ರದೀಪ ಪಟ್ಟಣ ಸೇರಿದಂತೆ ಇತರರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...