ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 104 ಪರೀಕ್ಷಾ ಕೇಂದ್ರಗಳಿದ್ದು, 34,367 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 131 ಕೇಂದ್ರಗಳಿದ್ದು, 47,576 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎರಡೂ ಜಿಲ್ಲೆಗಳ ಒಟ್ಟು 81,943 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆಗಾಗಿ ಎಲ್ಲಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದ್ದು, ಭದ್ರತಾ ದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಊರುಗಳಿಂದ ಪರೀಕ್ಷಾ ಕೇಂದ್ರಗಳವರೆಗೆ ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ ನಡೆಸಲು ಒಟ್ಟು 2,134 ಕೊಠಡಿಗಳನ್ನು ಬಳಸಲಾಗಿದ್ದು, ಪ್ರತಿ ಕೇಂದ್ರಕ್ಕೆ ಮುಖ್ಯ ಅಧೀಕ್ಷಕ, ಅಭಿರಕ್ಷಕ ಹಾಗೂ ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಿಸಲಾಗಿದೆ. 131 ಸ್ಥಳೀಯ ಜಾಗೃತ ದಳಗಳು ಹಾಗೂ 65 ಉಪ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಾಲ್ಕು ಹಾಗೂ ತಾಲ್ಲೂಕು ಮಟ್ಟದಲ್ಲಿ 24 ಸ್ಕ್ಯಾಡ್ ತಂಡಗಳನ್ನು ರಚಿಸಿ ಪರೀಕ್ಷೆಯ ಮೇಲ್ವಿಚಾರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕೋಡಿ ಡಿಡಿಪಿಐ ಆರ್.ಎಸ್. ಸೀತಾರಾಮು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಹಣವನ್ನು ಡಬಲ್ ಮಾಡುವುದಾಗಿ ವಂಚನೆ : ಆರೋಪಿಗಳ ಬಂಧನ
ಈ ಸಂದರ್ಭದಲ್ಲಿ ಡಯಟ್ ಪ್ರಾಚಾರ್ಯ ಸಂಜು ಹುಲ್ಲೊಳ್ಳಿ, ನೋಡಲ್ ಅಧಿಕಾರಿ ಹರಿದಾಸ್ ಖಾಡೆ ಹಾಗೂ ರಾಜು ದೇವಋಷಿ ಉಪಸ್ಥಿತರಿದ್ದರು.




