ಬೆಳಗಾವಿ : ಕಬ್ಬಿನ ತೂಕದ ಮೋಸ ನಿಲ್ಲಿಸಲಿ: ಸ್ವಾಮೀಜಿ ರೈತ ಮುಖಂಡರ ಸಭೆಯಲ್ಲಿ ಒಗ್ಗಟ್ಟಿನ ನಿರ್ಧಾರ

Date:

ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮಾಡುತ್ತಿರುವ ಆರೋಪಿತ ಮೋಸದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಸ್ವಾಮೀಜಿಗಳು ಮತ್ತು ರೈತ ಮುಖಂಡರು ಶನಿವಾರ ತೀರ್ಮಾನ ಕೈಗೊಂಡರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಹಲವು ಮುಖಂಡರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ,
“ಕಬ್ಬಿನ ತೂಕದಲ್ಲಿ ಸ್ವಾಮೀಜಿ ರೈತ ಎಂಬ ವ್ಯತ್ಯಾಸವಿಲ್ಲ. ನಾನು ಕಳಿಸಿದ ಕಬ್ಬಿಗೂ ತೂಕದಲ್ಲಿ ಹೊಡೆಯುತ್ತಾರೆ,” ಎಂದು ಆರೋಪಿಸಿದರು.

ನಿಚ್ಚಣಕಿ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ ಪ್ರಶ್ನಿಸಿ,
“ಲಾರಿ ತೂಕದಲ್ಲಿ ಎರಡು ಟನ್‌ ಕಬ್ಬು ಹೊಡೆದು ₹200 ನೀಡಿದರೆ ರೈತರಿಗೆ ಏನು ಪ್ರಯೋಜನ?” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ನಾಯಕ ಇಂಗಳಗುಪ್ಪೆ ಕೃಷ್ಣಗೌಡ ಮಾತನಾಡಿ,
“ಸಮೀರವಾಡಿಯಲ್ಲಿ ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವುದು ರೈತರ ಕೆಲಸವಲ್ಲ. ಕಿಡಿಗೇಡಿಗಳು ಮಾಡಿದ ಕೃತ್ಯ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖಂಡ ಮೆಹಬೂಬ ನವಲಗುಂದ ಹೇಳಿದರು:
“ಕಬ್ಬಿನ ತೂಕದಲ್ಲಿ ಮಾತ್ರವಲ್ಲ, ಸೋಯಾಬೀನ್ ಮತ್ತು ಗೋವಿನಜೋಳದಲ್ಲಿಯೂ ಕ್ವಿಂಟಲ್‌ಗೆ ಆರು ಕೆ.ಜಿ ತೂಕದಲ್ಲಿ ಮೋಸ ನಡೆದಿದೆ. ವ್ಯಾಪಾರಸ್ಥರು–ಕಾರ್ಖಾನೆ ಮಾಲೀಕರಿಗೆ ಅನುಕೂಲವಾಗುವ ಕಾಯ್ದೆಯನ್ನು ಸರ್ಕಾರ ತಂದಿರುವುದರಿಂದ ರೈತರು ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಬೇಕು.”

ಸಭೆಯಲ್ಲಿ ನಿಂಗಪ್ಪ ತಡಕೋಡ, ಶಿವನಸಿಂಗ್ ಮೊಕಾಶಿ, ಬೀರಪ್ಪ ದೇಶನೂರ, ಬಸವರಾಜ ಮೊಕಾಶಿ, ಮಲ್ಲಿಕಾರ್ಜುನ ಕೊಡೊಳ್ಳಿ, ಎಂ.ಎಫ್. ಜಕಾತಿ, ಅಪ್ಪೇಶ ದಳವಾಯಿ, ನಾಗರತ್ನ ಪಾಟೀಲ, ಮಹಾದೇವಿ ಹುಯಿಲಗೋಳ, ರಘುನಾಥ ನಡುವಿನಮನಿ, ವಿಜಯಕುಮಾರ ಶಿಂಧೆ ಸೇರಿದಂತೆ ಅನೇಕ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಿತ್ತೂರು ಸುತ್ತಲಿನ ಹಳ್ಳಿಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...