ಬೆಳಗಾವಿ | ವಿದ್ಯುತ್‌ ತಂತಿ ತಗುಲಿ ಕಬ್ಬಿನ ಹೊಲಕ್ಕೆ ಬೆಂಕಿ; ಅಪಾರ ಹಾನಿ

Date:

ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ರೈತರೊಬ್ಬರ ಕಬ್ಬಿನ ಜಮೀನಿಗೆ ವಿದ್ಯುತ್ ತಗುಲಿ ನ.21ರಂದು ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾಗಿದೆ. ಗ್ರಾಮದ ರೈತ ಬಾಳಪ್ಪ ತುಕ್ಕನ್ನವರ ಎಂಬುವವರಿಗೆ ಸೇರಿದ್ದ ಸುಮಾರು ಆರು ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆಯಲಾಗಿತ್ತು.

ಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆ ಮೇಲೆ, ವಿದ್ಯುತ್ ಪ್ರಸರಣದ ತಂತಿಗಳು ಜೋತು ಬಿದ್ದಿದ್ದವು. ಜೋತು ಬಿದ್ದ ವಿದ್ಯುತ್ ತಂತಿಗಳನ್ನು ತೆರುವುಗೊಳಿಸುವಂತೆ ರೈತರು ಸಂಬಂಧಿಸಿದ ಹೆಸ್ಕಾಂ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರು. ಅಷ್ಟರಲ್ಲಿ ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ಅಂದಾಜು ₹12 ಲಕ್ಷ ಹಾನಿ ಸಂಭವಿಸಿದೆ ಎಂದು ರೈತ ಗೋಳಾಡುತ್ತಿದದ್ದಾರೆ.

ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ, ಅಕ್ಕ-ಪಕ್ಕದ ಜಮೀನಿನ ರೈತರು ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಕಬ್ಬು ಸುಟ್ಟು ಭೂದಿಯಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...