ಬೆಳಗಾವಿ ಮಾರ್ಗದ ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಅಮೀನಭಾವಿ ಗ್ರಾಮದ ಬಳಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಮಹಿಳಾ ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಗವಾಡ ತಾಲೂಕಿನ ಶಿರಗುಪ್ಪ ಗ್ರಾಮದ ನಿವಾಸಿ ಸುವರ್ಣ ಮೋನೆ (37) ಮೃತರು. ಇವರು ಅರಿಹಂತ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಬೈಕ್‌ನಲ್ಲಿ ಬೆಳಗಾವಿ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಸ್ ಮಹಿಳೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.





