ಬೆಳಗಾವಿ | ಕಣ್ಣಿಗೆ ಕಾರದ ಪುಡಿ ಎರಚಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

Date:

ಬೆಳಗಾವಿ ನಗರದ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನಪುಡಿ ಎರಚಿ, ಅವರು ಧರಿಸಿದ್ದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಹಾಪುರ ಶಾಸ್ತ್ರಿ ನಗರದ 2ನೇ ಕ್ರಾಸ್ ನಿವಾಸಿ ಸ್ವಾಗತ ರಘುನಾಥ ಢಾಪಳೆ ಬಂಧಿತ ಆರೋಪಿಯಾಗಿದ್ದಾನೆ.

ಮಾಸ್ಕ್ ಧರಿಸಿ ಜ.27ರಂದು ಮನೆಗೆ ನುಗ್ಗಿದ ಕಳ್ಳ ಪ್ರಿಯಾಂಕಾದೇವಿ ಮುರುಗನ್ ಅವರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನ ಮಾಡಿದ್ದ. ಮೊಬೈಲ್ ಲೋಕೇಷನ್‌ ಆಧರಿಸಿ ಆತನನ್ನು ಬಂಧಿಸಿ, ₹3.50 ಲಕ್ಷ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...