ಬೆಳಗಾವಿ : ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಕಟ್ಟಿ ಥಳಿಸಿದ ಘಟನೆ ಕೋಮು ಸಂಘರ್ಷ ಅಲ್ಲ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಶ್ರೀರಾಮ ಸೇನೆಯ ಐವರು ಕಾರ್ಯಕರ್ತರನ್ನು ಕಟ್ಟಿ ಥಳಿಸಿದ ಘಟನೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕೋಮು ಸಂಘರ್ಷ ಘಟನೆ ಅಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ “ಬಂಧಿತರಲ್ಲಿ ಒಬ್ಬ ಹಿಂದೂ ಹಾಗೂ ಮೂವರು ಮುಸ್ಲಿಮರು ಇದ್ದಾರೆ. ಇದು ಕೋಮು ಹಿಂಸೆಯ ಪ್ರಕರಣವಲ್ಲ. ಘಟನೆಯ ಪ್ರತಿ ಅಂಗವನ್ನು ಗಂಭೀರವಾಗಿ ಪರಿಶೀಲಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದರು.

ಜೂನ್ 26ರಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಐದು ಹಸುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು, ಹುಕ್ಕೇರಿ ಪೊಲೀಸ್ ಠಾಣೆಗೆ ಕರೆತಂದಿದ್ದರು. ಹಸುಗಳನ್ನು ಜಾತ್ರೆಯಲ್ಲಿ ಖರೀದಿಸಿ ಸಾಕಾಣಿಕೆಗೆ ಕರೆತರುತ್ತಿದ್ದೆವು ಎಂದು ಮಾಲೀಕರು ದಾಖಲೆ ನೀಡಿದರು. ಪೊಲೀಸರು ನಂತರ ಹಸುಗಳನ್ನು ಬೆಳಗಾವಿಯ ಗೋಶಾಲೆಗೆ ಕಳುಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 28ರಂದು ಹಸುಗಳ ಮಾಲೀಕ ಬಾಬುಸಾಬ್ ಮುಲ್ತಾನಿ ಗೋಶಾಲೆಗೆ ತೆರಳಿ, ಹಸುಗಳನ್ನು ಮರಳಿ ಕರೆದುಕೊಂಡು ಹೋಗುತ್ತಿದ್ದ ವೇಳೆ, ಶ್ರೀರಾಮ ಸೇನೆಯ ಕಾರ್ಯಕರ್ತರು ಹಿಂಬಾಲಿಸಿ, ಅವರ ಮನೆಗೆ ತೆರಳಿ ಗಲಾಟೆ ನಡೆಸಿದ್ದಾರೆ. ಅದೇ ಸಂದರ್ಭದಲ್ಲಿ ಮನೆಯಲ್ಲಿದ್ದ ಮಹಿಳೆಯರು ಸಹಾಯಕ್ಕಾಗಿ ಕೂಗಿದಾಗ ಗ್ರಾಮಸ್ಥರು ಧಾವಿಸಿ, ಐವರು ಕಾರ್ಯಕರ್ತರನ್ನು ಊರ ಮಧ್ಯೆ ತೆಂಗಿನ ಮರಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಈ ಕುರಿತು ಯಾರೂ ದೂರು ನೀಡದ ಕಾರಣ, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ನಾವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ. ಹಾಗೆಯೇ ಮನೆಗೆ ನುಗ್ಗಿದ ಆರೋಪದ ಮೇಲೆ ಶ್ರೀರಾಮ ಸೇನೆಯ ಕಾರ್ಯಕರ್ತರ ವಿರುದ್ಧವೂ ಪ್ರತ್ಯೇಕ ದೂರು ದಾಖಲಾಗಿದೆ,” ಎಂದು ಎಸ್‌ಪಿ ತಿಳಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...