ಬೆಳಗಾವಿ | ಸಕ್ಕರೆ ಕಾರ್ಖಾನೆಗಳ ಬಾಕಿ ಬಿಲ್ ಪಾವತಿ ಬೇಗನೆ ಆಗಲಿವೆ : ಸಚಿವ ಶಿವಾನಂದ ಪಾಟಿಲ್

Date:

ರಾಜ್ಯದಲ್ಲಿ ಕೆಲವು ಸಕ್ಕರೆ ಕಾರ್ಖಾನೆಗಳು ಶೇ 75ರಿಂದ ಶೇ 80ರವರೆಗೆ ಕಬ್ಬಿನ ಬಿಲ್‌ ಪಾವತಿಸಿವೆ, ಕೆಲವು ಕಾರ್ಖಾನೆಗಳು ಶೇ 55ರಿಂದ ಶೇ 60ರಷ್ಟು ಪಾವತಿಸಿವೆ. ಎಲ್ಲಾ ಬಾಕಿ ಬಿಲ್‌ಗಳು ಆದಷ್ಟು ಬೇಗನೆ ಪಾವತಿಯಾಗುವ ವಿಶ್ವಾಸವಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟಿಲ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ 72 ಸಕ್ಕರೆ ಕಾರ್ಖಾನೆಗಳಿದ್ದು, ಕಬ್ಬಿನ ತೂಕ ಮಾಡಲು ಅನಲಾಗ್ ತೂಕದ ಯಂತ್ರ ಬಳಸಲಾಗುತಿತ್ತು. ಈಗ ಡಿಜಿಟಲ್ ತೂಕದ ಯಂತ್ರ ಬಳಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಸರ್ಕಾರವೇ ತೂಕದ ಯಂತ್ರ ಅಳವಡಿಸಲಿದೆ. ಮೊದಲ ಹಂತದಲ್ಲಿ ಎರಡು ಮೊಬೈಲ್‌
ತೂಕದ ಯಂತ್ರಗಳನ್ನು ಅಳವಡಿಸುತ್ತೇವೆ. ಸ್ಥಳಾವಕಾಶದ ಲಭ್ಯತೆ ಆಧರಿಸಿ ನಂತರದ ದಿನಗಳಲ್ಲಿ ಕಾರ್ಖಾನೆಗಳಲ್ಲಿ ಐದ ರಿಂದ ಆರು ಯಂತ್ರಗಳನ್ನು ಅಳವಡಿಸುತ್ತೇವೆ’ ಎಂದು ಹೇಳಿದ್ದಾರೆ.

ಈ ವರ್ಷ ರಾಜ್ಯದಾದ್ಯಂತ ಕಬ್ಬು ನುರಿಸುವಿಕೆ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಆಗಲಿದೆ. 5 ಲಕ್ಷ ಟನ್‌ ಕಬ್ಬು ನುರಿಸುವ ನಿರೀಕ್ಷೆಯಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...