ಬೆಳಗಾವಿ | ಬಿಮ್ಸ್ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ

Date:

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಇಲ್ಲಿಯವರೆಗೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತ ಬಾಣಂತಿಯಾಗಿದ್ದು, ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಅವರಿಗೆ ಹೆರಿಗೆ ಆಗಿತ್ತು ಆದರೆ ಬಿಪಿ ಲೋ ಆಗಿ ಬಾಣಂತಿ ಮಹಿಳೆಗೆ ಸೀರಿಯಸ್ ಆಗಿದೆ ಎಂಬ ಮಾಹಿತಿಯನ್ನು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದರು .

ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಳಿಕ ವೈದ್ಯರು ಗಂಗವ್ವ ಗೊಡಕುಂದ್ರಿ ಕುಟುಂಬಸ್ಥರ ಕಡೆಯಿಂದ ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡು ಮೃತದೇಹವನ್ನು ಕೊಟ್ಟು ಕಳುಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಮ್ಸ್​ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...