ಬೆಳಗಾವಿ | ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 8 ಲಕ್ಷ ಮೌಲ್ಯದ ವಸ್ತು ವಶ

Date:

ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು ನಡೆದ ಕಳ್ಳತನ ಪ್ರಕರಣ ದಾಖಲಾದ ನಂತರ, ತನಿಖೆ ಕೈಗೊಂಡ ಪೊಲೀಸರು ಸವದತ್ತಿ ತಾಲ್ಲೂಕಿನ ಹಿರೇಕೊಪ್ಪ ಗ್ರಾಮದ ಸಂಜು ದುಂಡಪ್ಪ ಬೋಳೆತ್ತಿನ ಮತ್ತು ಮಂಜುನಾಥ ಶೇಖಪ್ಪ ಹೊಂಗಲ ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹6.60 ಲಕ್ಷ ಮೌಲ್ಯದ ಬಂಗಾರ, ₹1.35 ಲಕ್ಷ ಬೆಲೆಬಾಳುವ ಬೆಳ್ಳಿಯ ಆಭರಣ ಹಾಗೂ ₹5 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಒಟ್ಟು ₹8 ಲಕ್ಷ ಮೌಲ್ಯದ ವಸ್ತುಗಳು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರ ಜೊತೆಗೆ, ಸವದತ್ತಿ ಠಾಣೆಯ 3 ಪ್ರಕರಣಗಳು ಮತ್ತು ಬೈಲಹೊಂಗಲ ಠಾಣೆಯ 1 ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಬೆಳಗಾವಿ ಎಸ್‌ಪಿ, ಹೆಚ್ಚುವರಿ ಎಸ್‌ಪಿ, ರಾಮದುರ್ಗ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಸವದತ್ತಿ ಪಿಐ ಡಿ.ಎಸ್. ಧರ್ಮಟ್ಟಿ, ಪಿಎಸ್‌ಐ ಕಲ್ಮಶ ಬನ್ನೂರ, ಎಲ್.ಆರ್. ಗೌಡಿ ಮತ್ತು ಸಿಬ್ಬಂದಿ ಉದ್ದಪ್ಪ. ಎಚ್.ಪೂಜೇರಿ, ಅಮರ ಸಾರಾಪುರೆ, ಮಹೇಶ ಮಾಳಳ್ಳಿ, ಉಮೇಶ ಗಾಣಗಿ, ಎಂ.ಎಫ್. ಪಾಟೀಲ, ಎಲ್.ಪಿ. ಸುಣಧೋಳಿ, ವಿನೋದ ಟಕ್ಕಣ್ಣವರ, ಸಚಿನ ಪಾಟೀಲ ಹಲವರು ಯಶಸ್ವಿಯಾಗಿ ನಡೆಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...