ಬೆಳಗಾವಿ : ಅನೈತಿಕ ಸಂಬಂಧ ಹಿನ್ನೆಲೆ ಪತಿಯ ಹತ್ಯೆ ಮೂವರ ಬಂಧನ

Date:

ಹರ್ಲಾಪೂರದಿಂದ ರಾಮಾಪೂರಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದ್ದ ಯುವಕನ ಭಯಾನಕ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೃತ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಅಮ್ಮಿನಭಾಂವಿ ಗ್ರಾಮದ ಈರಪ್ಪ ಯಲ್ಲಪ್ಪ ಆಡಿನ ಎಂದು ಗುರುತಿಸಲಾಗಿದೆ. ಈತನ ಪತ್ನಿ ಕರೆವ್ವ ಕಮಲವ್ವ ಆಡಿನ, ಖಾನಪೇಟೆ ಗ್ರಾಮದ ಫಕೀರಪ್ಪ ಸೋಮಪ್ಪ ಕಣವಿ ಮತ್ತು ಸಾಬಣ್ಣ ಲಕ್ಷ್ಮಣ ಮಾದರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಅನೈತಿಕ ಸಂಬಂಧದ ಹಿನ್ನಲೆ:
ವಿಚಾರಣೆ ವೇಳೆ ಈರಪ್ಪನ ಪತ್ನಿ ಕರೆವ್ವ ಹಾಗೂ ಫಕೀರಪ್ಪ ನಡುವಿನ ಅನೈತಿಕ ಸಂಬಂಧ ಇದ್ದದ್ದು ಹಾಗೂ ಅವರ ಸಂಪರ್ಕಕ್ಕೆ ಪತಿ ಈರಪ್ಪ ಅಡ್ಡಿಯಾಗುತ್ತಿದ್ದದ್ದು ಗೊತ್ತಾಗಿದೆ. ಆಕ್ರೋಶದಿಂದ ಕೂಡಿದ ಮೂವರು ಸಂಚು ರೂಪಿಸಿ ಈರಪ್ಪನನ್ನು ಅಮ್ಮಿನಭಾಂವಿಯಿಂದ ಕರೆತಂದು, ಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮೊದಲು ಟವೆಲ್‌ನಿಂದ ಉಸಿರುಗಟ್ಟಿಸಿ, ನಂತರ ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ : ಆರೋಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

ಸಿಪಿಐ ವಿನಾಯಕ ಬಡಿಗೇರ ನೇತೃತ್ವದಲ್ಲಿ ಪಿಎಸ್‌ಐ ಸವಿತಾ ಮುನ್ಯಾಳ ಹಾಗೂ ಅವರ ತಂಡದಲ್ಲಿ ಎಎಸ್‌ಐ ಎಲ್.ಟಿ. ಪವಾರ, ವೈ.ಟಿ. ಕೋಟೀ, ಎಸ್.ಎಸ್. ಚೌದರಿ, ಎಸ್.ಎಂ. ಜಾಧವ, ವಿನೋದ ಟಕ್ಕನ್ನವರ, ಸಚಿನ್ ಪಾಟೀಲ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...