ಬೆಳಗಾವಿ : ಟ್ರಕ್ ಬಸ್ ನಡುವೆ ಡಿಕ್ಕಿ ಚಾಲಕರಿಗೆ ಗಂಭೀರ ಗಾಯ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ-ಮುಧೋಳ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸರಕು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು, ಚಾಲಕರು ಗಂಭೀರ ಗಾಯಗೊಂಡಿದ್ದಾರೆ.

ಟ್ರಕ್‌ನೊಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ಪರದಾಡಬೇಕಾಯಿತು. ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಥಳಕ್ಕೆ ತಕ್ಷಣವೇ ಚಿಕ್ಕೋಡಿ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...