ಬೆಳಗಾವಿ : ಕಬ್ಬು ಕಟಾವು ವೇಳೆ ಭೀಕರ ದುರಂತ ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರು ಸಾವು

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕಬ್ಬು ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಸಂಭವಿಸಿದ ಭೀಕರ ದುರಂತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಆಕಸ್ಮಿಕವಾಗಿ ಸಿಲುಕಿದ ಪರಿಣಾಮ ಬೌರವ್ವಾ ಲಕ್ಷ್ಮಣ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ಮಲ್ಲಪ್ಪ ರುದ್ರಗೌಡರ (65) ಮೃತಪಟ್ಟಿದ್ದಾರೆ. ಇಬ್ಬರೂ ಕಬ್ಬು ಕಟಾವು ಸಂದರ್ಭದಲ್ಲಿ ಯಂತ್ರದ ಬಳಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಯಂತ್ರದೊಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...