ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಕರೆಯಮ್ಮ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಬಸವರಾಜ ಫಕ್ಕೀರಪ್ಪ ಮಾದರ (41) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಅವರು ರಸ್ತೆ ಬದಿಯಲ್ಲಿ ಸಾಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮಾರಕಾಸ್ತ್ರ ತೋರಿಸಿ ದರೋಡೆ: 4 ಗಂಟೆಯಲ್ಲಿ ಆರೋಪಿಯ ಬಂಧನ
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಯರಗಟ್ಟಿ ಪೊಲೀಸ್ ಠಾಣೆಯ ಎಎಸ್‌ಐ ವೈ.ಎಂ. ಕಡಕೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.





