ಮಲಪ್ರಭಾ ನದಿಗೆ ಹಾರಿ ಜೈಲ್ ವಾರ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಜೈಲ್ ವಾರ್ಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇತ್ತೀಚೆಗೆ ಹೊಸ ಮನೆ ನಿರ್ಮಿಸಿಕೊಂಡಿದ್ದ ವಿನೋದ ಅವರು ಮದುವೆಗಾಗಿ ಹೆಣ್ಣು ಹುಡುಕುತ್ತಿದ್ದರು ಎನ್ನಲಾಗಿದೆ. ಆದರೆ ಮದುವೆ ವಿಚಾರದಲ್ಲಿ ಅಡಚಣೆ ಎದುರಾದ ಹಿನ್ನೆಲೆಯಲ್ಲಿ ಮಾನಸಿಕವಾಗಿ ಮನನೊಂದು ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸೋಶಿಯಲ್ ಮೀಡಿಯಾ ಹನಿಟ್ರ್ಯಾಪ್ ಜಾಲ: ಮಹಿಳೆಯ ಬಂಧನ, ಸಹಚರ ಪರಾರಿ
ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ




