ಬೆಳಗಾವಿ : ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ: ಕಾರ್ಯದರ್ಶಿಗೆ ₹20,000 ದಂಡ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯತಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಕಾರ್ಯದರ್ಶಿ ಎಂ.ಡಿ. ಬಡಿಗೇರ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಕೋರಲಾದ ಮಾಹಿತಿಯನ್ನು ಸಮಯಕ್ಕೆ ಒದಗಿಸದ ಹಿನ್ನೆಲೆಯಲ್ಲಿ ರಾಜ್ಯ ಮಾಹಿತಿ ಆಯೋಗ, ಬೆಳಗಾವಿ ಪೀಠವು ಸುಮಾರು ₹20 ಸಾವಿರ ದಂಡ ವಿಧಿಸುವ ಆದೇಶ ಹೊರಡಿಸಿದೆ.

ಓಬಳಾಪುರ ಗ್ರಾಮದ ಮಾಹಿತಿ ಹಕ್ಕು ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ ಅವರು ನೀಡಿದ ಅರ್ಜಿಗೆ ಸರಿಯಾದ ಉತ್ತರ ನೀಡದೇ ಇರುವುದರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ 25 ಜನವರಿ 2020 ರಂದು ನಡೆದ ವಿಚಾರಣೆಯಲ್ಲಿ ಮಾಹಿತಿ ಅಧಿಕಾರಿಯು:

ಕೋರಿದ ಮಾಹಿತಿಯನ್ನು ಒದಗಿಸದಿರುವುದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯೋಗದ ವಿಚಾರಣೆಗೆ ಹಾಜರಾಗದೇ ಇರುವುದು

ಗೈರಾಗಲು ಯಾವುದೇ ಲಿಖಿತ ಸಮಜಾಯಿಷಿ ಸಲ್ಲಿಸದೇ ಇರುವುದು

ಇವೆಲ್ಲವನ್ನು ಆಯೋಗ ಗಂಭೀರ ನಿರ್ಲಕ್ಷ್ಯ ಎಂದೇ ಪರಿಗಣಿಸಿದೆ.

ಆಯೋಗವು ಮಾಹಿತಿ ಹಕ್ಕು ಕಾಯ್ದೆ 2005ರ ಕಲಂ 20(1) ಅಡಿಯಲ್ಲಿ ಕ್ರಮ ಜರುಗಿ, ಬಡಿಗೇರ ಅವರಿಗೆ ದಂಡ ವಿಧಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಅವರು ಓಬಳಾಪುರ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಹೊಸಕೇರಿ ಪಂಚಾಯತಿಯಲ್ಲಿ ಕಾರ್ಯದರ್ಶಿಗಳಾಗಿದ್ದಾರೆ.

ಮಾಹಿತಿ ಹಕ್ಕು ವಿಷಯಗಳಲ್ಲಿ ಅಧಿಕಾರಿಗಳ ಜವಾಬ್ದಾರಿ ಮತ್ತು ಪಾರದರ್ಶಕತೆಯ ಕೊರತೆಯನ್ನು ಈ ಘಟನೆ ಮತ್ತೆ ಹೊರಹಾಕಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...