ಬೆಳಗಾವಿ | ವಿಟಿಯು 25ನೇ ಘಟಿಕೋತ್ಸವ (ಭಾಗ-2) ಫೆ.2ಕ್ಕೆ

Date:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವದ ಭಾಗ-2 ಫೆಬ್ರವರಿ 2ರಂದು ಜ್ಞಾನ ಸಂಗಮದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 96 ವಿದ್ಯಾರ್ಥಿಗಳಿಗೆ ವಿವಿಧ ರ್ಯಾಂಕ್‌ಗಳನ್ನು ಪ್ರದಾನ ಮಾಡಲಾಗುವುದು ಎಂದು ವಿಟಿಯು ಕುಲಪತಿ ಡಾ. ವಿದ್ಯಾಶಂಕರ್ ಎಸ್. ತಿಳಿಸಿದರು.

ಗುರುವಾರ ವಿಟಿಯು ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹೋಟ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಫ್ಲಾಗ್ ಕರ್ನಾಟಕ ನೌಕಾ ನೆಲೆಯ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ಸಚಿವ ಡಾ. ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ ಎಂದರು.

ಎಂಬಿಎ, ಎಂಸಿಎ, ಎಂ.ಟೆಕ್, ಪಿಎಚ್.ಡಿ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದ 9,540 ವಿದ್ಯಾರ್ಥಿಗಳ ಪೈಕಿ 8,702 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆಯಲು ಅರ್ಹರಾಗಿದ್ದಾರೆ. ಘಟಿಕೋತ್ಸವದಲ್ಲಿ ಎಂಬಿಎ-4,928, ಎಂ.ಸಿ.ಎ-2,960, ಎಂ.ಟೆಕ್-718, ಪಿ.ಎಚ್.ಡಿ-59 ಸೇರಿದಂತೆ ಒಟ್ಟು 8,702 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿನ್ನದ ಪದಕ ಪಡೆದವರು:

ಶಿವಮೊಗ್ಗದ ಜವಾಹರಲಾಲ್ ನೆಹರು ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಜೆ. ಪಾರ್ವತಿ ಸಾಲೇರಾ (4 ಚಿನ್ನದ ಪದಕ), ಬೆಂಗಳೂರಿನ ಆರ್.ಎನ್.ಎಸ್. ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಎಚ್.ಸಿ. ಕಾವ್ಯ (3), ದಾವಣಗೆರೆ ಯುಬಿಡಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಬಿ.ಎಸ್‌. ಸಂಚಿತಾ (3), ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿ. ಯೋಗೇಶ್ ಗೌಡ, ಆಕ್ಷ್ಯರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಸಿ. ರೇವಂತ ಕುಮಾರ್ ಹಾಗೂ ಬಳ್ಳಾರಿಯ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಬಿ. ರಾಹುಲ್ ಡೇವಿಡ್ ತಲಾ ಎರಡು ಚಿನ್ನದ ಪದಕ ಪಡೆದಿದ್ದಾರೆ.

ಇ-ವಿದ್ಯಾರ್ಥಿ ಮಿತ್ರ ಪೋರ್ಟಲ್ ಜಾರಿ:

ವಿದ್ಯಾರ್ಥಿಗಳ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ವಿಟಿಯು ‘ಇ-ವಿದ್ಯಾರ್ಥಿ ಮಿತ್ರ’ ಪೋರ್ಟಲ್ ಜಾರಿಗೆ ತಂದಿದೆ. ಪೋರ್ಟಲ್‌ನಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ತಮ್ಮ ದೂರುಗಳನ್ನು ದಾಖಲಿಸಬಹುದಾಗಿದ್ದು, ನೇರವಾಗಿ ಕುಲಪತಿಗಳ ಕಚೇರಿಗೆ ಸಂಪರ್ಕ ಕಲ್ಪಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ ಎಂದು ಡಾ. ವಿದ್ಯಾಶಂಕ‌ರ್ ಎಸ್‌. ತಿಳಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...