ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಸುರಿದ ಭಾರಿ ಮಳೆಗೆ ಎಣ್ಣೆಹೊಂಡ ಸಂಪೂರ್ಣ ಜಲಾವೃತಗೊಂಡಿದೆ. ಮಳೆಯ ನೀರು ನುಗ್ಗಿ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದ ಕೌಂಟರ್‌ಗಳು, ಗರ್ಭಗುಡಿ ಹಾಗೂ ಸುತ್ತಮುತ್ತಲನ್ನು ಆವರಿಸಿಕೊಂಡಿದೆ.
ಮಳೆಯಿಂದ ದೇವಸ್ಥಾನ ಪ್ರದೇಶದಲ್ಲಿ ಭಕ್ತರಿಗೆ ತೊಂದರೆ ಉಂಟಾಗಿದ್ದು, ತಾತ್ಕಾಲಿಕವಾಗಿ ಪ್ರವೇಶವನ್ನು ನಿಯಂತ್ರಿಸಲಾಗಿದೆ.
ಮತ್ತೊಂದೆಡೆ, ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿರುವ ಪೊಲೀಸ್ ಚೌಕಿಯಲ್ಲಿ ವ್ಯಕ್ತಿಯೊಬ್ಬ ನೀರಿನಲ್ಲಿ ಸಿಲುಕಿ ಪರದಾಡಿದ ಘಟನೆ ಆತಂಕ ಮೂಡಿಸಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.





