ಬೆಳಗಾವಿ | ಹುಟ್ಟುಹಬ್ಬದ ನೆಪದಲ್ಲಿ ವೀಲಿಂಗ್: ರೌಡಿಶೀಟ‌ರ್ ಸೇರಿ ಏಳು ಆರೋಪಿಗಳ ಬಂಧನ

Date:

ಹುಟ್ಟುಹಬ್ಬದ ಸಂಭ್ರಮದ ಹೆಸರಿನಲ್ಲಿ ಥಾರ್ ಜೀಪ್ ಹಾಗೂ ಬೈಕ್‌ಗಳಲ್ಲಿ ಅಪಾಯಕಾರಿ ವೀಲಿಂಗ್ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್‌ಲೋಡ್ ಮಾಡಿದ ರೌಡಿಶೀಟರ್ ಸೇರಿ ಏಳು ಯುವಕರನ್ನು ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ಆಸನಗಳ ಥಾರ್ ಜೀಪ್‌ನಲ್ಲಿ ಹತ್ತು ಜನರನ್ನು ಹತ್ತಿಸಿಕೊಂಡು ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸಲಾಗಿದ್ದು, ಬೈಕ್‌ಗಳಲ್ಲಿ ಮೂವರು ಕುಳಿತು ಬೇಕಾಬಿಟ್ಟಿ ಓಡಾಟ ನಡೆಸಿದ್ದರು. ಈ ದೃಶ್ಯಗಳಿಗೆ ಹಾಡು ಸೇರಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋ ಪರಿಶೀಲಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯರಗಟ್ಟಿ ಪಟ್ಟಣದ ರೌಡಿಶೀಟರ್ ಸುರೇಶ ಭಜಂತ್ರಿ ಸೇರಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಒಂದು ಮಹಿಂದ್ರಾ ಮಾಡಿಫೈಡ್ ಓಪನ್ ಜೀಪ್, ಒಂದು ಸ್ಕಾರ್ಪಿಯೋ, ಒಂದು ಬೊಲೆರೋ, ಮೂರು ಬಜಾಜ್ ಪಲ್ಸ‌ರ್ ಬೈಕ್‌ಗಳು ಹಾಗೂ ಒಂದು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್-350 ಸೇರಿ ಒಟ್ಟು 12 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಏಳು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, “ನಿಗದಿತ ಸಂಖ್ಯೆಗೆ ಮೀರಿಸಿ ವಾಹನಗಳಲ್ಲಿ ಪ್ರಯಾಣಿಸುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸುವುದು ಕಾನೂನುಬಾಹಿರ. ಅವಾಚ್ಯ ಶಬ್ದ ಬಳಕೆ, ಅಶ್ಲೀಲ ರೀಲ್ಸ್ ಅಪ್‌ಲೋಡ್ ಮಾಡಿದರೆ ಬಿಎನ್‌ಎಸ್‌ ಕಲಂ 296 ಹಾಗೂ ಐಟಿ ಕಾಯ್ದೆ 67, 67(ಎ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಮಗನ ಅಂತ್ಯಸಂಸ್ಕಾರ ಮಾಡಲಾಗದೆ ಪರಿತಪಿಸಿದ ತಾಯಿ: ಮನಕಲಕುವ ಘಟನೆ

ಸಾಮಾಜಿಕ ಜಾಲತಾಣಗಳಲ್ಲಿ ರೌಡಿಸಂ ಪ್ರೋತ್ಸಾಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...