ಬೆಳಗಾವಿ | ಫೈನಾನ್ಸ್ ಕಂಪನಿ ಕಿರುಕುಳ ಮಹಿಳೆ ಆತ್ಮಹತ್ಯೆ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಸ್ವ ಹಾಗೂ ಸಹಾಯ ಸಂಘದ ಹೆಸರಿನಲ್ಲಿ ಸಾಲ ಮತ್ತು ಫೈನಾನ್ಸ್ ಕಂಪನಿ ಸಿಬ್ಬಂದಿಗಳ ಕಿರುಕುಳದಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ತಾಲ್ಲೂಕಿನ ಯಮನಾಪುರ ಗ್ರಾಮದ ಹೊಳೆಪ್ಪ ದಡ್ಡಿ ಹಾಗೂ ಕುಟುಂಬದ ಇತರ ನಾಲ್ವರು ಸೇರಿ ಸ್ವಸಹಾಯ ಸಂಘ ತೆರೆದಿದ್ದರು. ಸರೋಜಾ ಅವರು ಹೆಚ್ಚಿನ ರಿಯಾಯಿತಿ ಸಿಗುತ್ತದೆ ಎಂಬ ಆಸೆಗೆ ದಡ್ಡಿ ಅವರ ಸಂಸ್ಥೆಯಿಂದ ಸಾಲ ಪಡೆದಿದ್ದರು. ಅರ್ಧದಷ್ಟು ಸಾಲ ಮಾತ್ರ ನೀವು ತುಂಬಬೇಕು, ಇನ್ನರ್ಧ ನಮ್ಮ ಸಂಸ್ಥೆ ಭರಿಸುತ್ತದೆ’ ಎಂದು ಸರೋಜಾ ಅವರನ್ನು ನಂಬಿಸಲಾಗಿತ್ತು ಎಂದು ಕಾಕತಿ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಹೊಳೆಪ್ಪ ದಡ್ಡಿ ಮತ್ತು ಕುಟುಂಬದವರು 7,000 ಮಹಿಳೆಯರನ್ನು ಈ ರೀತಿ ವಂಚಿಸಿದ್ದಾರೆ ಎಂಬ ಕಾರಣಕ್ಕೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ, ಪಡೆದ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ತುಂಬಬೇಕು ಎಂದು ಫೈನಾನ್ಸ್‌ನವರು ಸರೋಜಾ ಸೇರಿ ಹಲವರಿಗೆ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಸರೋಜಾ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾಕತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...