ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಸಿಐಡಿ ವಶಕ್ಕೆ ಮೂವರು ಆರೋಪಿಗಳು

Date:

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ.

ಗ್ರಾಮದ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ ಹಾಗೂ ಶಿವಪ್ಪ ರಾಯಪ್ಪ ವಣ್ಣೂರ ಎಂಬ ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದುಕೊಂಡಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಎರಡು ವಾರಗಳ ಹಿಂದೆ ಪ್ರೇಮಿಗಳು ಊರು ತೊರೆದಿದ್ದರು. ಇದರಿಂದ ಕುಪಿತಗೊಂಡ ಯುವತಿಯ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹೈಕೋರ್ಟ್‌, “ಘಟನೆ ನಡೆಯುವಾಗ ಮೂಕಪ್ರೇಕ್ಷಕರಂತೆ ನಿಂತಿದ್ದ ಎಲ್ಲರಿಗೂ ದಂಡ ವಿಧಿಸಬೇಕು. ಆ ಹಣವನ್ನು ಸಂತ್ರಸ್ತೆಗೆ ನೀಡಬೇಕು” ಎಂದು ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...