ಬೆಳಗಾವಿ : ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದ ಬಾಮೈದ : ಕತ್ತು ಕೊಯ್ದುಕೊಂಡು ಆತ್ಮಹತ್ಯೆ

Date:

ಕುಡುಗೋಲಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ನಡೆದಿದೆ.

ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದ ಬಾಮೈದನ ಮಾತಿಗೆ ಸಿಟ್ಟಾದ ಮಲ್ಲಪ್ಪ ಎಂಬ ವ್ಯಕ್ತಿ ತನ್ನ ಬಾಮೈದ, ಪತ್ನಿ ಎದುರೇ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಲ್ಲಪ್ಪ ಹಾಗೂ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ವಿಚಾರಕ್ಕೆ ಒಂದು ದಿನ ಬಾಮೈದ ಹಾಗೂ ಪತ್ನಿ ಜೊತೆ ಮಲ್ಲಪ್ಪ ಗಲಾಟೆ ಮಾಡಿಕೊಂಡಿದ್ದಾನೆ. ಆವೇಷದಲ್ಲಿ ಬಾಮೈದ ಮಲ್ಲಿಕಾರ್ಜುನ ನೀನು ಸತ್ತರೆ ಅಕ್ಕ ಚೆನ್ನಾಗಿ ಇರುತ್ತಾಳೆ ಎಂದು ಹೇಳಿದ್ದಾನೆ. ಇದರಿಂದ ನೊಂದ ಮಲ್ಲಪ್ಪ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಾರಿಹಾಳ ಠಾಣೆಯಲ್ಲಿ ಮಲ್ಲಿಕಾರ್ಜುನ ವಿರುದ್ಧ ಪ್ರಕರಣ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...