ಬೆಳಗಾವಿ | ಅಂಗನವಾಡಿ ಸಹಾಯಕಿ ವರ್ಗಾವಣೆಗೆ ಲಂಚಕ್ಕೆ ಬೇಡಿಕೆ; ಅಧಿಕಾರಿ, ಸಿಬ್ಬಂದಿ ಲೋಕಾ ಬಲೆಗೆ

Date:

ಬೆಳಗಾವಿಯ ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಲಾಖೆ ಸೂಪರಿಂಟೆಂಡೆಂಟ್ ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಿಗೇರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಗಳು. ಇಬ್ಬರು ಸೇರಿ, ಹುಕ್ಕೇರಿ ಮೂಲದ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬ್ಳೆಯವರ ವರ್ಗಾವಣೆಗೆ 30 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಗನವಾಡಿ ಸಹಾಯಕಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು
ಅಂಗನವಾಡಿ ಸಹಾಯಕಿಯಿಂದ ಅಧಿಕಾರಿಗಳು 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ಆಗುತ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥರಾಗಿದ್ದು, ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...