ಬೆಳಗಾವಿ | ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ತಪ್ಪಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

Date:

ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳ ಉಪಟಳ ತಪ್ಪಿಸಬೇಕು, ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮಹಿಳೆಯರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಬೆಳಗಾವಿ ತಾಲ್ಲೂಕಿನ ಯಮನಾಪುರ ಗ್ರಾಮದ ನಿವಾಸಿಗಳು, ಖಾಸಗಿ ಫೈನಾನ್ಸ್‌ಗಳ ಕಿರುಕುಳ ತಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದರು.

ಮಹರ್ಷಿ ವಾಲ್ಮೀಕಿ ಮಹಿಳಾ ಸ್ವ- ಸಹಾಯ ಸಂಘದ ಮೂಲಕ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ, ಖಾಸಗಿ ಫೈನಾನ್ಸ್‌ಗಳಿಂದ ಸಾಲ ನೀಡಿದ್ದರು. ಈಗ ಯಾವುದೇ ಸಬ್ಸಿಡಿ ನೀಡದೆ ವಂಚಿಸಿದ್ದಾರೆ. ಖಾಸಗಿ ಫೈನಾನ್ಸ್‌ನವರು ಪ್ರತಿ ದಿನ ಮನೆಗೆ ಬಂದು, ಹಣ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಲಿ ಮಾಡಿಕೊಂಡು ಉಪಜೀವನ ಸಾಗಿಸುತ್ತಿದ್ದೇವೆ. ಆರ್ಥಿಕ ಸಹಾಯ ಮಾಡುವ ಆಸೆ ತೋರಿಸಿ ಸ್ವ ಸಹಾಯ ಸಂಘ ಹಾಗೂ ಫೈನಾನ್ಸ್‌ಗಳು ಮೋಸ ಮಾಡುತ್ತಿವೆ. ಸಾವಿರಾರು ಮಹಿಳೆಯರು ಮೋಸ ಹೋಗಿದ್ದಾರೆ, ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆದರೂ ಫೈನಾನ್ಸ್‌ ಸಿಬ್ಬಂದಿ ನಿತ್ಯ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾಡಳಿ ಮಧ್ಯಪ್ರವೇಶಿಸಿ ಪ್ರಕರಣ ಇತರ್ಥ ಆಗುವರೆಗೂ ಖಾಸಗಿ ಫೈನಾನ್ಸ್‌ಗಳು ಹಣ ಮರುಪಾವತಿಸಿಕೊಳ್ಳದಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈಸಂದರ್ಭದಲ್ಲಿ ಶಾಂತು ಬಾಗರಾಯಿ, ಶಾನೂ ಟೋಕಲಿ, ಹುಲೆಪ್ಪ ಬಂಬರಗಿ, ದಿವಾಕರ ಮಾಸೆನಟ್ಟಿ ಮತ್ತು ವಿವಿದ ಪ್ರಗತಿಪರ ಸಂಘಟನೆಗಳು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...