ಬೆಳಗಾವಿ : ಗೂಡ್ಸ್ ವಾಹನ ಪಲ್ಟಿ ಕಾರ್ಮಿಕರು ಆಸ್ಪತ್ರೆಗೆ ದಾಖಲು

Date:

ಕೂಲಿ ಕೆಲಸಕ್ಕಾಗಿ ಹೊರಟಿದ್ದ 32 ಜನ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದ ಬಳಿ ನಡೆದಿದೆ.

ಅಥಣಿ ತಾಲೂಕಿನ ಯಂಕಚ್ಚಿ-ಯಲಿಹಡಗಲಿ ರಸ್ತೆ ಮಾರ್ಗ ಮಧ್ಯದಲ್ಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಪಲ್ಟಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಿಂದ ಅಡಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರು ವಾಹನದಲ್ಲಿದ್ದರು. ಈ ವೇಳೆ ವಾಹನದ ಟೈ‌ರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಸತ್ತಿ ಗ್ರಾಮದ ಮೂಲದ ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ತಕ್ಷಣವೇ 108 ಆಂಬುಲೆನ್ಸ್ ಸಿಬ್ಬಂದಿ ಆಗಮಿಸಿ ಗಾಯಾಳುಗಳನ್ನು ರಕ್ಷಿಸಿ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಐಗಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...