ಬೆಳಗಾವಿ | ದಲಿತ ಮಹಿಳೆಗೆ ನೀರು ಎರಚಿದ್ದನ್ನು ಪ್ರಶ್ನಿಸಿದಕ್ಕೆ ಯುವಕನ ಮೇಲೆ ಹಲ್ಲೆ

Date:

ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನು ಪ್ರಶ್ನಿಸಿದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ನಡೆದಿದೆ.

ಹನುಮಂತ ದೇವರ ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರು ಎರಚಿರುವ ಆರೋಪ ಇದ್ದು, ಇದನ್ನು ಪ್ರಶ್ನಿಸಿದ ಕುನ್ನಾಳ ಗ್ರಾಮದ ಲಕ್ಷ್ಮಣ್‌ ಮಾದರ ಎಂಬಾತನ ಮೇಲೆ ಹಾಗೂ ಮೂವರು ಮಹಿಳೆಯರ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.

ಮೇಲ್ವರ್ಗದ ಜನರಿಂದ ದಲಿತ ಮಹಿಳೆಯರ ಮೇಲೆ ಓಕಳಿ ನೀರು ಎರಚಲಾಗಿದೆ ಎಂದು ಆರೋಪಿಸಲಾಗಿದೆ. ನೀರು ಎರಚಬೇಡಿ ಎಂದು ತಡೆಯಲು ಹೋದ ದಲಿತ ಯುವಕನ ಮೇಲೆ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆಯುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ತೀವ್ರ ಗಾಯಗೊಂಡ ಯುವಕನಿಗೆ ಗೋಕಾಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಮದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...