ಪಾರ್ಟಿ ಮಾಡುತ್ತಿದ್ದ ಸಂದರ್ಭ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕೊಲೆಯಾದ ದುರ್ದೈವಿ ಯುವಕನನ್ನು ವಿನೋದ್ ಮಲಶೆಟ್ಟಿ (30) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಸಹಚರರೊಂದಿಗೆ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅಕಸ್ಮಾತ್ ಹಲ್ಲೆ ನಡೆಸಿದ್ದು, ಚಾಕುವಿನಿಂದ ಇರೆದು ಸ್ಥಳದಲ್ಲೇ ಕೊಂದಿದ್ದಾರೆ ಎಂದು ಪ್ರಾಥಮಿಕ ಮಾಹಿತಿ.
ಕೊಲೆಗೆ ಸ್ಪಷ್ಟ ಕಾರಣವೇನು ಎಂಬುದು ಇನ್ನೂ ಬೆಳಕಿಗೆ ಬಂದಿಲ್ಲ. ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೆಲ ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.





