ದೇಶದಲ್ಲಿ ಬಿಜೆಪಿ 1,000 ಶಾಸಕರನ್ನು ಖರೀದಿಸಿದೆ: ಸಚಿವ ಸಂತೋಷ್ ಲಾಡ್

Date:

ದೇಶದಲ್ಲಿ ಬಿಜೆಪಿ 1,000ಕ್ಕೂ ಹೆಚ್ಚು ಶಾಸಕರನ್ನು ಖರೀದಿಸಿ, 11 ರಾಜ್ಯಗಳಲ್ಲಿ ಸರ್ಕಾರಗಳನ್ನು ಪತನಗೊಳಿಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಮಕರ ಸಂಕ್ರಮಣದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಜೆಡಿಎಸ್-ಬಿಜೆಪಿಯವರು ಹೇಳುತ್ತಿದ್ದಾರೆ. ನಾವು ಭವಿಷ್ಯ ನುಡಿಯುವದಿಲ್ಲ. ಈ ಬಾರಿ ಕರ್ನಾಟಕದ ಜನತೆ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದ್ಧಾರೆ. ಕಾಂಗ್ರೆಸ್ ಬಹುಮತದ ಸರ್ಕಾರ ರಚಿಸಿದ್ದು, ಸಾಂವಿಧಾನಿಕವಾಗಿ ಸರ್ಕಾರ ನಡೆಯುತ್ತಿದೆ” ಎಂದು ಹೇಳಿದರು.

“ಬಿಜೆಪಿಯವರು ಕಳೆದ 10 ವರ್ಷದಲ್ಲಿ ವಿವಿದ ಪಕ್ಷಗಳ ಶಾಸಕರನ್ನು ಖರಿದಿಸಿ ಸರ್ಕಾರ ರಚಿಸಿದ್ದಾರೆ. ದೇಶದಲ್ಲಿ 1000 ಶಾಸಕರನ್ನು ಖರೀದಿಸಿ, 11 ಸರ್ಕಾರ ಪತನಗೊಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಜನರು ಮನೆಗೆ ಕಳುಹಿಸಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಕಾಂಗ್ರೆಸ್‌ಗೆ ಮಾತ್ರವಲ್ಲ ದೇಶಕ್ಕೆ ಪ್ರತಿಷ್ಠೆಯಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...