ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಸಚಿವ ಸ್ಥಾನಕ್ಕಾಗಿ ನಾನು ಆಕಾಂಕ್ಷಿ ಶಾಸಕ ರಾಜು ಕಾಗೆ

Date:

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು, ಅದು ಅಧಿವೇಶನದ ನಂತರ ಅಥವಾ ಮುಂಚಿತವಾಗಿ ನಡೆಯುವ ಸಾಧ್ಯತೆ ಇದೆ ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

“ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಶೀಘ್ರದಲ್ಲೇ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತೇನೆ,” ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಸಿದ್ದೇವಾಡಿ ಮತ್ತು ಮದಭಾವಿ ಗ್ರಾಮಗಳಲ್ಲಿ ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಎರಡು ಸಮುದಾಯ ಭವನಗಳ ಭೂಮಿಪೂಜೆ ಬುಧವಾರ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ್ಯದಿಂದ ಇಂದಿನವರೆಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯ ವಿಷಯದಲ್ಲಿ ಅನ್ಯಾಯ ಆಗುತ್ತಲೇ ಬಂದಿದೆ. ಇದು ರಾಜಕೀಯದ ವಿಷಯವಲ್ಲ. ಯಾವ ಸರ್ಕಾರ ಬಂದರೂ ಅನುದಾನ, ಅಭಿವೃದ್ಧಿ ಹಾಗೂ ರಾಜಕೀಯ ಹಂಚಿಕೆಯಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗಿದೆ. ದಿವಂಗತ ಉಮೇಶ ಕತ್ತಿ ಅವರ ನಂತರ ನಾನು ಈ ಭಾಗದ ಹಿರಿಯ ನಾಯಕ. ಆದ್ದರಿಂದ ಪ್ರತ್ಯೇಕ ರಾಜ್ಯದ ಕೂಗು ಎತ್ತುವುದು ಆಶ್ಚರ್ಯಕರವೇನಲ್ಲ,” ಎಂದು ಕಾಗೆ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವಿನಾಯಕ ಬಾಗಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾದೇವ ಕೋರೆ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಿಜಗುಣಿ ಮಗದುಮ್ಮ, ಮುಖಂಡರಾದ ಅಶೋಕ ಪೂಜಾರಿ, ಕೆ.ಆರ್. ಪಾಟೀಲ, ಶಿವಾನಂದ ಮಗದುಮ್ಮ, ಸಂಜಯ ಅದಾಟೆ, ಶಿವಾನಂದ ಇಬ್ರಾಹಿಮಪುರ, ಸಿದರಾಯ ತೋಟಕರ, ರಾವಸಾಬ ಚೌಗಲಾ, ಅಶೋಕ ಸೂರ್ಯವಂಶಿ ಹಾಗೂ ಅಸ್ಲಂ ಮುಲ್ಲಾ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...