ರಾಜ್ಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮೈಕೊರೆವ ಚಳಿಯಿಂದ ಜನರು ಹೈರಾಣಾಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಭಾರಿ ಶೀತಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ಘೋಷಿಸಿದೆ.
ಆರೇಂಜ್ ಅಲರ್ಟ್:
ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಯಾದಗಿರಿ
ಯೆಲ್ಲೋ ಅಲರ್ಟ್:
ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಧಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




