ಸಿದ್ದರಾಮಯ್ಯ ಕುಕ್ಕರ್ ಹಂಚಿಕೆ ಆರೋಪ; ರಾಜ್ಯ ಚುನಾವಣಾಧಿಕಾರಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Date:

ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಿಗೆ ಚುನಾವಣೆಗೆ ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿದ್ದಾರೆಂಬ ಅರೋಪ ಸಂಬಂಧ ರಾಜ್ಯ ಚುನಾವಣಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬವರು ರಾಜ್ಯ ಚುನಾವಣಾಧಿಕಾರಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ವರುಣಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್‌ ಹಂಚಿದ್ದಾರೆ ಎಂದು ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಆ ಬಗ್ಗೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆರೋಪ ಸಂಬಂಧ ಸ್ಪಷ್ಟನೆ ನೀಡಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, “ವಿಧಾನಸಭೆ ಚುನಾವಣೆ ನೀತಿಸಂಹಿತೆ ಜಾರಿಗೂ ಮುನ್ನವೇ ಕುಕ್ಕರ್‌ ವಿತರಣೆ ಮಾಡಲಾಗಿತ್ತು. ಅಲ್ಲದೆ, ಜನವರಿ 26ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ಅವುಗಳನ್ನು ಹಂಚಿಕೆ ಮಾಡಲಾಗಿತ್ತು” ಎಂದು ಹೇಳಿದ್ದರು. ಇದನ್ನು ನಂಜಪ್ಪ ಕೂಡ ಸಮ್ಮತಿಸಿದ್ದರು.

ಆದರೆ, ಇದೀಗ ಆ ಆರೋಪ ಮತ್ತೆ ಮುನ್ನೆಲೆಗೆ ಬಂಧಿದೆ. ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಚುನಾವಣಾಧಿಕಾರಿ ವಿರುದ್ಧ ದೂರು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾವು ದೂರು ದಾಖಲಿಸಿರುವ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಭೀಮಪ್ಪ ಗಡಾದ್, “ದಾಖಲೆ ಸಮೇತ ದೂರು ನೀಡಿದರೂ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕ್ರಮ ಕೈಗೊಂಡಿಲ್ಲ. ಅವರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ಆಯೋಗ ಕೂಡ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟ ನಡೆಸುತ್ತೇನೆ” ಎಂದು ಹೇಳಿದ್ದಾರೆ.

“ಐರನ್ ಬಾಕ್ಸ್, ಕುಕ್ಕರ್ ಹಂಚಿದ್ದರಿಂದ ನಮ್ಮ ತಂದೆ ಗೆದ್ದಿದ್ದರು ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಾಗಿದೆ. ಹೀಗಾಗಿ, ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದೆವು. ದೂರು ಅರ್ಜಿ ಬಗ್ಗೆ ಕೇಂದ್ರ ಚುನಾವಣೆ ಆಯೋಗದ ಮಾರ್ಗದರ್ಶನ ಕೇಳಿದ್ದೇವೆಂದು ಚುನಾವಣಾಧಿಕಾರಿ ಹೇಳಿದ್ದಾರೆ. ಮಾರ್ಗದರ್ಶನ ಕೋರಿ ಬರೆದ ಪತ್ರದ ನಕಲು ಪ್ರತಿ ನೀಡುವಂತೆ ಡಿಸೆಂಬರ್ 1ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಆದರೆ, ಆ ಪತ್ರದ ಪ್ರತಿ ಇನ್ನೂ ಸ್ವೀಕೃತವಾಗಿಲ್ಲ. ಸ್ವೀಕೃತವಾದ ಬಳಿಕ ಮಾಹಿತಿ ನೀಡುವುದಾಗಿ ಉತ್ತರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...