ಬೆಳಗಾವಿ | ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆ; ರಸ್ತೆ ನಿರ್ಮಾಣಕ್ಕೆ ಸಜ್ಜಾದ ಪಾಲಿಕೆ

Date:

ಬೆಳಗಾವಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮರುಬಳಕೆ ಮಾಡಿಕೊಂಡು ನಗರದ ಪರಿಸರವನ್ನೂ ರಕ್ಷಣೆಯೊಂದಿಗೆ ಅಭಿವೃದ್ಧಿಯ ಹೆಜ್ಜೆ ಇಡಲು ಮುಂದಾಗಿದೆ.

ನಗರ‍ಗಳ ಪರಿಸರ ರಕ್ಷಣೆಗಾಗಿ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ಇದೇ ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿಕೊಂಡು ಸುಸಜ್ಜಿತ ರಸ್ತೆ ನಿರ್ಮಾಣ ಮಾಡಬೇಕು ಎಂದು ಪಾಲಿಕೆ ಗುರಿಹೊಂದಿದೆ.

ಈಗಾಗಲೇ ಇದಕ್ಕೆ ಅನುಮೋದನೆ ಕೂಡ ಸಿಕ್ಕಿದ್ದು, ಜ.2ರಂದು ನಗರಾಭಿವೃದ್ಧಿ ಸಚಿವ ಬಿ.ಎಸ್‌.ಸುರೇಶ ಅವರು ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಲಾಸ್ಟಿಕ್ ನಿಷೇಧಿಸಿ ಸುಪ್ರೀಂಕೋರ್ಟ್‌ ಆದೇಶ. ಆದರೂ, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಳಕೆ‌ ಎಗ್ಗಿಲ್ಲದೇ ನಡದೇ ಇದೆ. ಪ್ಲಾಸ್ಟಿಕ್‌ ತ್ಯಾಜ್ಯವನ್ನು ಪೌಡರ್‌ ಆಗಿ ಪರಿವರ್ತಿಸಿ, ಅದನ್ನು ರಸ್ತೆಗೆ ಡಾಂಬರೀಕರಣ ಮಾದರಿಯಲ್ಲಿ ಬಳಸಬೇಕು ಎಂಬುದೇ ಈ ಯೋಜನೆ.

ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಈ ಯೋಜನೆಗೆ ಕಾರ್ಯರೂಪ ನೀಡಲು ಮಹಾನಗರ ಪಾಲಿಕೆ ಆಡಳಿತ ಗುಂಪು ನಿರ್ಧರಿಸಿದೆ. ಈಚೆಗೆ ನಡೆದ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ತೀರ್ಮಾಣ ಕೈಗೊಳ್ಳಲಾಗಿದೆ. ನಾಲ್ಕು ವರ್ಷಗಳ ಬಳಿಕ ಹೊಸದಾಗಿ ಮೇಯರ್‌ ಚುನಾಯಿತರಾದ ಬಳಿಕ ಅಭಿವೃದ್ಧಿ ಹೆಜ್ಜೆ ಇಡಲಾಗಿದೆ.

ನಗರದ ವಿವಿಧ ಕಡೆಗೆ ದಾಳಿ ನಡೆಸಿರುವ ಮಹಾನಗರ ಪಾಲಿಕೆ ಟನ್‌ಗಟ್ಟಲೇ ಪ್ಲಾಸ್ಟಿಕ್‌ ವಶಕ್ಕೆ ಪಡೆದುಕೊಂಡಿದೆ. ಇದೆಲ್ಲವನ್ನೂ ಪೌಡರ್ ತಯಾರಿಕೆಗೆ ಬಳಸಲಿದೆ. ಜತೆಗೆ ಮನೆ ಮನೆಯಲ್ಲಿ ಸಂಗ್ರಹಿಸುವ ಒಣ ಕಸದಲ್ಲಿಯ ಪ್ಲಾಸ್ಟಿಕ್ ಬೇರ್ಪಡಿಸಿ ಪೌಡರ್ ತಯಾರಿಕೆಗೆ ಬಳಸಿಕೊಳ್ಳಲಾಗುತ್ತಿದೆ. ಪಾಲಿಕೆಯ ಆರೋಗ್ಯ ಇಲಾಖೆಯಿಂದ ಪೌಡರ್ ತಯಾರಿಸಿ ಅದನ್ನು ಕಟ್ಟಡ ನಿರ್ಮಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.

ರಸ್ತೆ ಕಾಮಗಾರಿಯಲ್ಲಿ ಪ್ಲಾಸ್ಟಿಕ್ ಪೌಡರ್‌ ಬಳಕೆಯನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲ ಗುತ್ತಿಗೆದಾರರಿಗೂ ಸೂಚನೆ ನೀಡಲಾಗಿದೆ. ಹೀಗಾಗಿ ಪ್ರತಿ 200 ಮೀಟರ್ ರಸ್ತೆಗೆ 250 ಕೆಜಿಯಿಂದ 300 ಕೆಜಿ ಪ್ಲಾಸ್ಟಿಕ್ ಪೌಡರ್ ಬೇಕಾಗುತ್ತದೆ. ಬೆಳಗಾವಿ ನಗರದಲ್ಲಿ ಪ್ರತಿದಿನ 6 ಟನ್‌ಗೂ ಹೆಚ್ಚು ಪ್ಲಾಸ್ಟಿಕ್‌ ತ್ಯಾಜ್ಯ ಸಿಗುತ್ತದೆ.

ಇಲ್ಲಿನ ಆಟೊ ನಗರದ ಕಾರ್ಖಾನೆಯೊಂದರಲ್ಲಿ ಪ್ಲಾಸ್ಟಿಕ್ ಪೌಡರ್ ತಯಾರಿಸಲಾಗುತ್ತಿದೆ. ಇಲ್ಲಿಂದ ರಸ್ತೆಗೆ ಅವಶ್ಯಕತೆ ಇರುವ ಪೌಡರ್ ನೀಡಲಾಗುತ್ತಿದೆ. ಪ್ರಾಯೋಗಿಕವಾಗಿ ಸದ್ಯ 500 ಕೆ.ಜಿ. ಪೌಡರ್ ಸಿದ್ಧಪಡಿಸಲಾಗಿದೆ.

ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್‌ ಪೌಡರ್‌ ಸಿದ್ಧಪಡಿಸುವ ಯಂತ್ರ ಖರೀದಿಸುವುದಕ್ಕೂ ಪಾಲಿಕೆ ನಿರ್ಧರಿಸಿದೆ. ಇಲ್ಲಿ ಸಿದ್ಧಗೊಳ್ಳುವ ಪ್ಲಾಸ್ಟಿಕ್‌ ಅನ್ನು ಗುತ್ತಿಗೆದಾರರಿಗೆ ಮಾರಾಟ ಮಾಟಲಾಗುವುದು. ಇದರಿಂದ ಪಾಲಿಕೆಗೆ ಆದಾಯವೂ ಬರಲಿದೆ ಎಂದು ಪಾಲಿಕೆಯ ಪರಿಸರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹನುಮಂತ ಕಲಾದಗಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...