ಯುವಕರ ಖಾತೆಗಳಲ್ಲಿ ಕೋಟಿ ಹಣ ವರ್ಗಾವಣೆ: ಬೆಳಗಾವಿಯಲ್ಲಿ ಸೈಬರ್ ಜಾಲ ಬಯಲು

Date:

ಬೆಳಗಾವಿ ನಗರದಲ್ಲಿ ಅಮಾಯಕರು ಸೈಬ‌ರ್ ವಂಚಕರ ಜಾಲಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಕಮಿಷನ್ ಆಸೆ ತೋರಿಸಿ ಅಮಾಯಕರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ನಗರದಲ್ಲೇ ಸುಮಾರು 2,900 ಮ್ಯೂಲ್ ಅಕೌಂಟ್‌ಗಳು ಸಕ್ರಿಯವಾಗಿವೆ ಎಂಬುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.

ಸೈಬ‌ರ್ ಖದೀಮರು ಹೊಸ ಮಾದರಿಯ ವಂಚನೆಗೆ ಕೈಹಾಕಿದ್ದು, ನಿರುದ್ಯೋಗಿ ಯುವಕರು ಮತ್ತು ಮಹಿಳೆಯರನ್ನೇ ಗುರಿಯಾಗಿಸಿ ಮೋಸ ಮಾಡುತ್ತಿದ್ದಾರೆ. ಈ ಸಂಬಂಧ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಈ ನಾಲ್ಕು ಪ್ರಕರಣಗಳಲ್ಲಿ ಸೈಬ‌ರ್ ವಂಚಕರು ದೂರದಲ್ಲೇ ಕುಳಿತು ಅಮಾಯಕರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಕಮಿಷನ್ ನೀಡುತ್ತೇವೆ ಎಂದು ನಂಬಿಸಿ ಬ್ಯಾಂಕ್‌ ಖಾತೆ ಮಾಹಿತಿ ಪಡೆದುಕೊಳ್ಳುತ್ತಾರೆ. ಬಳಿಕ ಆ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿ ಮತ್ತೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಳ್ಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೀತಿಯಾಗಿ ವಂಚನೆಗೆ ಬಳಸುವ ಬ್ಯಾಂಕ್ ಖಾತೆಗಳನ್ನು ‘ಮ್ಯೂಲ್ ಅಕೌಂಟ್’ ಎಂದು ಕರೆಯಲಾಗುತ್ತದೆ. ಬೆಳಗಾವಿ ನಗರದಲ್ಲೇ ಸುಮಾರು 2,900 ಮ್ಯೂಲ್ ಅಕೌಂಟ್‌ಗಳು ಸಕ್ರಿಯವಾಗಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದೀಗ ಪೊಲೀಸರು ಈ ಅಕೌಂಟ್‌ಗಳ ಬೆನ್ನತ್ತಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್‌ ಆಯುಕ್ತ ಭೂಷಣ ಬೊರಸೆ, “ನಗರದ ಯುವಕನೊಬ್ಬ ಕಮಿಷನ್ ಆಸೆಯಿಂದ ಒಂಬತ್ತು ಬ್ಯಾಂಕ್ ಖಾತೆಗಳನ್ನು ತೆರೆದು ಕೊಟ್ಟಿದ್ದಾನೆ. ಈ ಖಾತೆಗಳ ಮೂಲಕ ಸೈಬ‌ರ್ ವಂಚಕರು ₹80 ಲಕ್ಷಕ್ಕೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಬಳಿಕ ಆ ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ತನಿಖೆಯಲ್ಲಿ ಅಮಾಯಕರ ಬ್ಯಾಂಕ್‌ ಖಾತೆಗಳನ್ನು ಕಮಿಷನ್ ಆಸೆ ತೋರಿಸಿ ವಂಚನೆಗೆ ಬಳಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ” ಎಂದು ತಿಳಿಸಿದ್ದಾರೆ.

ಇನ್ನೂ ಕೆಲ ಪ್ರಕರಣಗಳಲ್ಲಿ ದುಬೈನಲ್ಲಿ ಇರುವ ವ್ಯಕ್ತಿಯೊಬ್ಬ ತನ್ನ ತಾಯಿ ಮೂಲಕ ಸ್ವಸಹಾಯ ಸಂಘದ ಹೆಸರಿನಲ್ಲಿ ಬ್ಯಾಂಕ್‌ ಖಾತೆ ತೆರೆದಿರುವುದು ಪತ್ತೆಯಾಗಿದೆ. ಮತ್ತೆ ಕೆಲವರಿಗೆ ಮನೆಯಲ್ಲೇ ಕೆಲಸ ಕೊಡುತ್ತೇವೆ ಎಂದು ಹೇಳಿ ಕಮಿಷನ್‌ ಆಸೆ ತೋರಿಸಿ ಖಾತೆಗಳನ್ನು ಬಳಸಿಕೊಂಡಿರುವುದು ತಿಳಿದುಬಂದಿದೆ.

ಹೀಗಾಗಿ ಸೈಬ‌ರ್ ವಂಚಕರು ಮ್ಯೂಲ್ ಅಕೌಂಟ್‌ಗಳ ಮೂಲಕ ಅಮಾಯಕರನ್ನೇ ಸೈಬ‌ರ್ ಅಪರಾಧಿಗಳನ್ನಾಗಿ ಮಾಡುತ್ತಿದ್ದಾರೆ. ಸಾರ್ವಜನಿಕರು ಯಾರಿಗೂ ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನೀಡಬಾರದು ಹಾಗೂ ಇಂತಹ ವಂಚಕರಿಂದ ಎಚ್ಚರ ವಹಿಸಬೇಕು ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...