ಹೋಳಿ ಸಂಭ್ರಮದಲ್ಲಿ ಅಸಭ್ಯ ಗೀತೆಗಳಿಗೆ ನೃತ್ಯ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮನವಿ

Date:

ಬಾಗಲಕೋಟೆ ಜಿಲ್ಲೆಯ ಕೆಲವು ಉನ್ನತ ಅಧಿಕಾರಿಗಳು ಹೋಳಿ ಹಬ್ಬದ ಸಂಭ್ರಮದ ವೇಳೆ ಅಸಭ್ಯ ಹಾಗೂ ದ್ವಂದಾರ್ಥ ಗೀತೆಗಳಿಗೆ ನೃತ್ಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಮಾಜಿಕ ಹೋರಾಟಗಾರರಾದ ಶ್ರೀನಿವಾಸಗೌಡ ಪಾಟೀಲ ಅವರು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕರಿಗೆ ಈ ಕುರಿತು ಮನವಿ ನೀಡಿದ್ದಾರೆ.

1001464458

ಮನವಿಯಲ್ಲಿ ತಿಳಿಸಿರುವಂತೆ, ಮಾರ್ಚ್ 8 ರಂದು ಜಿಲ್ಲಾ ಪೊಲೀಸ್‌ ಅಧೀಕ್ಷಕರ ನಿವಾಸದ ಸಮೀಪ ಆಯೋಜಿಸಲಾದ ಹೋಳಿ ಸಂಭ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಪೊಲೀಸ್‌ ಅಧೀಕ್ಷಕರಾದ ಸಿದ್ದಾರ್ಥ ಗೊಯಲ್, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರರ ಹಾಗೂ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿಗಳು ಭಾಗವಹಿಸಿ ಅಸಭ್ಯ ಮತ್ತು ದ್ವಂದಾರ್ಥ ಪದಗಳಿರುವ ಗೀತೆಗಳಿಗೆ ನೃತ್ಯ ಮಾಡಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಗಲಕೋಟ ಬಸ್ಟ್ಯಾಂಡನ್ಯಾಗ ನಿಂತಾಳ ಕಡಬಿಡಕಿ, ಕಾಲೇಜು ಮುಗಿಸಿ ಬರ್ತಾಳ ನನ್ನ ಹುಡಗಿ” ಸೇರಿದಂತೆ ಕೆಲ ಗೀತೆಗಳು ಕಾಲೇಜು ವಿದ್ಯಾರ್ಥಿನಿಯರ ಗೌರವಕ್ಕೆ ಧಕ್ಕೆ ತರುವಂತಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಅಸಭ್ಯ ಗೀತೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳೇ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದು ಕರ್ತವ್ಯಲೋಪವಾಗಿದ್ದು ಖಂಡನೀಯ ಎಂದು ಪಾಟೀಲ ತಿಳಿಸಿದ್ದಾರೆ.

ಈ ಕುರಿತು ರಾಜ್ಯ ಡಿಜಿಪಿ, ಉತ್ತರ ವಲಯ ಐಜಿಪಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೂ ಮೊದಲು ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಹುಂಡಿಯಲ್ಲಿ ₹97.49 ಲಕ್ಷ ಕಾಣಿಕೆ

ಆದ್ದರಿಂದ ಈ ಪ್ರಕರಣದಲ್ಲಿ ಭಾಗವಹಿಸಿದ ಅಧಿಕಾರಿಗಳು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ತಕ್ಷಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...