ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ : ಬಸವರಾಜ ಹೊರಟ್ಟಿ

Date:

ಈ ವರ್ಷದ ಚಳಿಗಾಲದ ಅಧಿವೇಶನವನ್ನು ಡಿಸೆಂಬರ 8ರಿಂದ ಬೆಳಗಾವಿಯಲ್ಲೇ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. “ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿಯವರೊಂದಿಗೆ ಸಭೆ ನಡೆಸಿ ಅಗತ್ಯ ಪೂರ್ವಸಿದ್ಧತೆಗಳ ಬಗ್ಗೆ ಚರ್ಚೆ ಮಾಡುತ್ತೇನೆ,” ಎಂದು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, “ಈ ಕುರಿತು ಮುಖ್ಯಮಂತ್ರಿ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ, ಅವರು ಸಹ ಒಪ್ಪಿಕೊಂಡಿದ್ದಾರೆ. ಆದರೆ ಶಾಸಕರುಗಳಲ್ಲಿ ಯಾವುದೇ ಗಂಭೀರತೆ ಕಾಣುತ್ತಿಲ್ಲ. ಉತ್ತರ ಕರ್ನಾಟಕದ ಶಾಸಕರು ತಮ್ಮ ಪ್ರದೇಶದ ಅಭಿವೃದ್ಧಿ ಕುರಿತು ಮಾತನಾಡುವುದಿಲ್ಲ, ಆದರೆ ದಕ್ಷಿಣ ಕರ್ನಾಟಕದವರು ಹೆಚ್ಚು ಮಾತನಾಡುತ್ತಾರೆ. ಅದಕ್ಕಾಗಿ ಪ್ರತಿ ಬುಧವಾರ ಮತ್ತು ಗುರುವಾರ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗೆ ಸಮಯವನ್ನು ಮೀಸಲಿಡಲಾಗಿದೆ,” ಎಂದು ಹೇಳಿದರು.

ರಾಜಕೀಯದ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ದುಡ್ಡು ಕೊಟ್ಟು ಮತ ಹಾಕಿಸಿಕೊಳ್ಳುವುದು, ದುಡ್ಡು ತಗೊಂಡು ಮತ ಹಾಕುವುದು — ಇದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತದೆ. ಕಾಲ ಸುಧಾರಣೆ ಅಗತ್ಯ. ಆದರೆ ಪ್ರಶ್ನೆ ಕೇಳಿದ ಶಾಸಕರೇ ಒಂದು ನಿಮಿಷದಲ್ಲೇ ಹೊರಟು ಹೋಗುತ್ತಾರೆ,” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ, ಹೊರಟ್ಟಿ ಹೇಳಿದರು: “ಅದು ನವೆಂಬರ್ ಕ್ರಾಂತಿಯೋ, ಡಿಸೆಂಬರ್ ಕ್ರಾಂತಿಯೋ ಗೊತ್ತಿಲ್ಲ. ಆದರೆ ಕ್ರಾಂತಿ ಮಾಡೋರು, ಕ್ರಾಂತಿ ಮಾಡಿಸಿಕೊಳ್ಳುವವರು ಇಬ್ಬರೂ ಅಲ್ಲೇ ಇದ್ದಾರೆ. ನಾವು ಕಣ್ಣಾರೆ ನೋಡಿಕೊಂಡು ಹೋಗುವುದು ಅಷ್ಟೇ. ದಿನನಿತ್ಯ ಮಾಧ್ಯಮಗಳಲ್ಲಿ ಅವರ ವಿಚಾರಗಳೇ ಕಾಣುತ್ತಿವೆ. ಆದರೆ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಯಾರೂ ಮಾತನಾಡುವುದಿಲ್ಲ. ಜನರ ಪರ ಕೆಲಸ ಮಾಡುವ ಹೊಣೆಗಾರಿಕೆ ಎಲ್ಲರಿಗೂ ಇದೆ,” ಎಂದು ಹೇಳಿದರು.

ಮಾಜಿ ಸಂಸದ ಪ್ರತಾಪ ಸಿಂಹ ಹಾಗೂ ಶಾಸಕ ಪ್ರದೀಪ ಈಶ್ವರರ ನಿಂದನಾತ್ಮಕ ಹೇಳಿಕೆಗಳ ಕುರಿತು ಮಾತನಾಡಿದ ಹೊರಟ್ಟಿ, “ಮನುಷ್ಯತ್ವ ಇರುವವರು ಇಂತಹ ಮಾತುಗಳನ್ನಾಡುವುದಿಲ್ಲ. ಶಾಸಕರು ಮಾದರಿಯಾಗಬೇಕು. ಮಾತನಾಡುವ ಶೈಲಿಯಲ್ಲೂ ಸಂಸ್ಕಾರ ಇರಬೇಕು. ಸಮಾಜದಲ್ಲಿ ಒಳ್ಳೆಯದನ್ನು ಮಾಡುವ ಸೌಜನ್ಯತೆ ಕೆಲ ಶಾಸಕರಲ್ಲಿ ಕಾಣಿಸುತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...