ಬೆಳಗಾವಿ | ಕಾಘವಾಡದಲ್ಲಿ ತಾಲೂಕು ಮಟ್ಟದ ಕಚೇರಿಗಳನ್ನು ಸ್ಥಾಪಿಸುವಂತೆ ಆಗ್ರಹ

Date:

ಬೆಳಗಾವಿ ಜಿಲ್ಲೆಯ ಕಾಘವಾಡ ತಾಲೂಕು ರಚನೆಯಾಗಿ 4 ವರ್ಷ ಕಳೆದಿವೆ. ಆದರೂ, ಇಲ್ಲಿಯವರೆಗೆ ತಾಲೂಕಿನಲ್ಲಿ ಇರಬೇಕಾದ ಅನೇಕ ಕಚೇರಿಗಳನ್ನು ನಿರ್ಮಿಸಿಲ್ಲ. ಶೀಘ್ರವಾಗಿ ತಾಲೂಕು ಮಟ್ಟದ ಎಲ್ಲ ಕಚೇರಿಗಳನ್ನು ತೆರೆಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಕಾಘವಾಡ ತಹಸಿಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು, “ಕಾಘವಾಡದಲ್ಲಿ ತೋಟಗಾರಿಕಾ ಇಲಾಖೆ ಕಚೇರಿ, ಉಪನೋಂಧನಾಧಿಕಾರಿ ಕಚೇರಿ, ಅಬಕಾರಿ ಇಲಾಖೆ, ಆಹಾರ ಇಲಾಖೆ, ಸಹಾಯಕ ಭೂ ಧಾಖಲೆಗಳ ಇಲಾಖೆ, ಕಾರ್ಮಿಕ ಇಲಾಖೆ, ಲೋಕೋಪಯೋಗಿ ಇಲಾಖೆ, ಜಲ ಮತ್ತು ಒಳನಾಡು ಸಾರಿಗೆ ಇಲಾಖೆ, ಆರ್‌ಟಿಓ ಇಲಾಖೆಯ ಕಚೇರಿಗಳಿಲ್ಲ. ಮಾತ್ರವಲ್ಲ, ಪರಿಸರ ಮಾಲಿನ್ಯ, ಸಹಕಾರ ನಿಬಂಧಕರು, ತಾಲೂಕು ಆರೋಗ್ಯಾಧಿಕಾರಿಗಳು, ಕೃಷಿ ಮಾರುಕಟ್ಟೆ. ಅಗ್ನಿಶಾಮಕ ದಳ. ಪಶು ಸಂಗೋಪನ ಇಲಾಖೆಯ ಕಚೆರಿಗಳು ಕೂಡ ಇಲ್ಲ. ಕೂಡಲೇ ಎಲ್ಲ ಇಲಾಖೆಗಳ ಕಚೇರಿಗಳನ್ನು ತೆರೆಯಬೇಕು. ಆ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...