ಬೆಳಗಾವಿ | ಸುವರ್ಣಸೌಧಕ್ಕೆ ರಾಜ್ಯ ಮಟ್ಟದ ಕಚೇರಿ ಸ್ಥಳಾಂತರಕ್ಕೆ ಆಗ್ರಹ

Date:

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ, ಉತ್ತರ ಕರ್ನಾಟಕದ ಪ್ರದೇಶಗಳ ಜನರ ಕಲ್ಯಾಣಕ್ಕಾಗಿ ರಾಜ್ಯ ಮಟ್ಟದ 9 ಕಚೇರಿಗಳನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ತೆರೆಯಲು 2019ರಲ್ಲಿಯೇ ಗೆಜೆಟ್‌ ಹೊರಡಿಸಲಾಗಿದೆ. ಆದರೂ, ಕಚೇರಿಗಳನ್ನು ಸ್ಥಳಾಂತರಿಸಿಲ್ಲ. ಕೂಡಲೇ ಕಚೇರಿಗಳನ್ನು ಸುವರ್ಣಸೌಧದಲ್ಲಿ ತೆರೆಯಬೇಕು ಎಂದು ಬೆಳಗಾವಿ ಜಿಲ್ಲೆಯ ಮಾಹಿತಿ ಹಕ್ಕು ಹೋರಾಟಗಾರ ಶ್ರೀನಿವಾಸಗೌಡ ಪಾಟಿಲ್ ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಅವರು, “ಕರ್ನಾಟಕ ಸರ್ಕಾರವು 9 ಕಚೇರಿಗಳಲ್ಲಿ 3 ಕಚೇರಿಗಳನ್ನು ಈಗಾಗಲೇ ಸ್ಥಳಾಂತರಿಸಿದೆ. 3 ಕಚೇರಿಗಳು ಈಗಲೇ ಸ್ಥಳಾಂತರಗೊಳ್ಳುತ್ತಿವೆ. ಇನ್ನು 3 ಕಚೇರಿಗಳನ್ನು 6 ತಿಂಗಳ ಕಾಲಾವಧಿಯಲ್ಲಿ ಸ್ಥಳಾಂತರಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು 2020ರಲ್ಲಿಯೇ ಹೈಕೋರ್ಟ್‌ ತಿಳಿಸಿದ್ದರು. ಆದರೆ, ಈವರೆಗೆ ಕಚೇರಿಗಳು ಸ್ಥಳಾಂತರವಾಗಿಲ್ಲ” ಎಂದು ದೂರಿದ್ದಾರೆ.

“ಹಿಂದಿನ ಸರ್ಕಾರ ತನ್ನ ಮಾತಿನಂತೆ ನಡೆದುಕೊಳ್ಳದೆ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ. ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುವ ಭ್ರಷ್ಟ ಮಂತ್ರಿಗಳು, ಭ್ರಷ್ಟ ಶಾಸಕರು, ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುವರ್ಣಸೌಧದಲ್ಲಿ ರಾಜ್ಯ ಮಟ್ಟದ ಕಚೇರಿಗಳನ್ನು ತೆರೆಯುವ ಬಗ್ಗೆ ಯಾವೊಬ್ಬ ಶಾಸಕರು, ಸಚಿವರು ಇಲ್ಲಿವರೆಗೂ ಧ್ವನಿ ಎತ್ತುತ್ತಿಲ್ಲ. ಭ್ರಷ್ಟಾಚಾರಕ್ಕೆ ಮಾತ್ರ ಸೀಮಿತವಾಗಿರುವ, ಐಷಾರಾಮಿ ಜೀವನ ಬಯಸುತ್ತಿರುವ ಜನಪ್ರತಿನಿಧಿಗಳು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

438 ಕೋಟಿ ರೂ. ವೆಚ್ಚ ಮಾಡಿ ಸುವರ್ಣಸೌಧವನ್ನು ಕಟ್ಟಲಾಗಿದೆ. ಆದರೆ, ಅದು ಖಾಲಿ ಉಳಿದಿದೆ. ಅದರ ನಿರ್ವಹಣೆಗೆ ಪ್ರತಿ ವರ್ಷ ಕೋಟ್ಯಾಂತರ ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದೆ. ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಿ, ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಅರ್ಧ ಇಲಾಖೆಗಳ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಬೇಕು. ಆ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಿ, ಅನುಮೋದಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...